ಮೈಸೂರು: ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಮಹಿಳೆಯೊಬ್ಬರು ಗುರುವಾರ ಮೃತ ಪಟ್ಟಿದ್ದಾರೆ.
ನಗರದ ಜಯಲಕ್ಷ್ಮಿ ಮೃತಪಟ್ಟವರು. ಇವರಿಗೆ ಟಿಬಿ ಸೇರಿದಂತೆ ಇನ್ನಿತರ ಗಂಭೀರ ಸಮಸ್ಯೆಗಳು ಇದ್ದವು. ಗುರುವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾದರು. ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.





