ಜಿಲ್ಲೆಗಳು

ಮೈಸೂರು : ಆರ್.ಟಿ.ನಗರದಲ್ಲಿ ಚಿರತೆ!

ಮೈಸೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆ ಹಾವಳಿ ಹೆಚ್ಚುತ್ತಲೇ ಇದ್ದು, ಇದೀಗ ನಗರ ಪ್ರದೇಶದಲ್ಲೂ ಚಿರತೆ ಕಾಣಿಸಿಕೊಳ್ಳುತ್ತಿರುವುದು ನಗರದ ಜನರ ನಿದ್ದೆಗೆಡಿಸಿದೆ. ವರ್ತುಲ ರಸ್ತೆ ಸಮೀಪ ಆರ್‌ಟಿ ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮಣ್ಣಿನ ಗುಡ್ಡದ ಹಿಂದೆ ಅವಿತಿದ್ದ ಚಿರತೆ ರಸ್ತೆ ದಾಟುವ ದೃಶ್ಯ ಕಾರಿನಲ್ಲಿ ಸಾಗುತ್ತಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದೆ. ರಸ್ತೆ ದಾಟುತ್ತಿದ್ದ ಚಿರತೆ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯರು ಇದೀಗ ಭಯಗ್ರಸ್ಥರಾಗಿದ್ದಾರೆ.
ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇತ್ತೀಚೆಗೆ ರಾಮಕೃಷ್ಣ ನಗರದಲ್ಲಿ ಕರುವೊಂದು ಪ್ರಾಣಿಯ ದಾಳಿಯಿಂದ ಮೃತಪಟ್ಟಿತ್ತು. ಇದು ನಾಯಿಗಳಿಂದ ಆಗಿರುವ ದಾಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದರು. ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಮೈದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸೆರೆ ಶುಕ್ರವಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago