ಮೈಸೂರಿನ ಮರಶೆ ಗ್ರಾಮ, ಹುಣಸೂರಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ
ಮೈಸೂರು: ಜಿಲ್ಲೆಯಲ್ಲಿ ಮತ್ತೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ವರುಣಾ ಹೋಬಳಿಗೆ ಸೇರಿದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಮರಶೆ ಗ್ರಾಮದಲ್ಲಿ ನಾಲ್ಕು ವರ್ಷದ ಚಿರತೆಯೊಂದು ಬೋನಿಗೆ ಬಿದ್ದಿದೆ.
ವಾರದ ಹಿಂದೆ ಇಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕೃಷ್ಣಪ್ಪ ಎಂಬವರ ಜಮೀನಿನಲ್ಲಿ ಅರಣ್ಯ ಸಿಬ್ಬಂದಿ ಬೋನು ಇಟ್ಟಿದ್ದರು. ಭಾನುವಾರ ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಆರ್ ಎಫ್ ಓ ಸುರೇಂದ್ರ, ಡಿಆರ್‌ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯಲಾಗಿದ್ದು, ಚಿಪ್ ಅಳವಡಿಸಿದ ಬಳಿಕ ಅರಣ್ಯಕ್ಕೆ ಬಿಡಲಾಗಿದೆ ಎಂದು ಮೈಸೂರು ಡಿಸಿಎಫ್ ಡಾ.ಕೆ.ಎನ್.ಬಸವರಾಜು ತಿಳಿಸಿದ್ದಾರೆ.
ಇದೇ ವೇಳೆ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ 15 ದಿನಗಳ ಅಂತರದಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಫೆ.16ರ ಗುರುವಾರ ಹಬ್ಬನಕುಪ್ಪೆ ನಾಗರಾಜಗೌಡರ ಜಮೀನಿನ ಮನೆ ಬಳಿ ಚಿರತೆ ಕರುವೊಂದನ್ನು ತಿಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಚಿರತೆ ಸೆರೆಗೆ ಬೋನು ಇಡಲಾಗಿತ್ತು. ಕರುವಿನ ಮಾಂಸವನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸೆರೆಯಾದ ಚಿರತೆಯನ್ನು ಆರ್ ಎಫ್ ಓ ನಂದಕುಮಾರ್ ನೇತೃತ್ವದ ತಂಡವು ಬಂಡೀಪುರದ ಮೂಲೆ ಹೊಳೆ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಟ್ಟಿದೆ ಎಂದು ಡಿಸಿಎಫ್ ಸೀಮಾ ತಿಳಿಸಿದ್ದಾರೆ. ಇದೇ ಗ್ರಾಮದ ಲೋಕೇಶ್ ಎಂಬವರ ಜಮೀನಿನಲ್ಲಿ 15 ದಿನಗಳ ಹಿಂದೆ ನಾಲ್ಕು ವರ್ಷದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು.
ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 65ಕ್ಕೂ ಹೆಚ್ಚು ಚಿರತೆಗಳನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಡಲಾಗಿದೆ. ತಿ. ನರಸೀಪುರ ಮತ್ತು ಹುಣಸೂರು ಭಾಗದಲ್ಲಿ ಅತಿ ಹೆಚ್ಚು ಚಿರತೆಗಳು ಸೆರೆಯಾಗಿವೆ
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…