ಬೋನಿಗೆ ಬಿದ್ದ ಚಿರತೆ: ಮಾರಶೆಟ್ಟಿ ಗ್ರಾಮಸ್ಥರು ನಿಟ್ಟುಸಿರು
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದೆ.
ಗ್ರಾಮದ ಹೊರವಲಯದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳನ್ನು ತಿಂದು ಪರಾರಿಯಾಗುತ್ತಿತ್ತು.
ಇದರ ಕಾಟಕ್ಕೆ ಬೇಸತ್ತ ಗ್ರಾಮಸ್ಥರು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಶುಕ್ರವಾರ ರಾತ್ರಿ ಗ್ರಾಮಕ್ಕೆ ಆಹಾರ ಅರಸಿ ಬಂದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ರಕ್ಷಿಸಿ ನಾಗರಹೊಳೆ ಅಭಯಾರಣ್ಯಕ್ಕೆ ಕಳುಹಿಸಲಾಗಿದೆ.
ಮೈಸೂರು ಜಿಲ್ಲೆಯ ನಾನಾ ಭಾಗಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಕಾಯುತ್ತಿದ್ದಾರೆ. ಶುಕ್ರವಾರ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿ ಬಿ. ಸೀ ಹಳ್ಳಿ ಬಳಿ ಮೂರು ಚಿರತೆ ಮರಿಗಳು ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದವು. ಈಗ ಇದರ ತಾಯಿಯನ್ನು ಹಿಡಿಯಲು ಬೋನು ಇರಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…