ಜಿಲ್ಲೆಗಳು

ಮೈಮುಲ್ ನ ಮಾಜಿ ಅಧ್ಯಕ್ಷರಾದ ಸಿ.ಬಸವೇಗೌಡರ ತಾಯಿ ನಿಧನ

ಮೈಸೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ (99) ರವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ.

ಮಧ್ಯಾಹ್ನ 2.00 ಗಂಟೆಯವರೆಗೆ ಮೈಸೂರಿನ ಗಂಗೋತ್ರಿ ಬಡಾವಣೆಯಲ್ಲಿ ಇರುವ ಬಸವೇಗೌಡರ ನಿವಾಸದಲ್ಲಿ ಮೃತರ ದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಸ್ವಗೃಹ ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ಮಾದೇಗೌಡನಹುಂಡಿಯಲ್ಲಿ ಸಂಜೆ 6.00 ಗಂಟೆಗೆ ಅಂತ್ಯ ಸಂಸ್ಕಾರ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈರಮ್ಮರವರು ಬಸವೇಗೌಡರು ಸೇರಿದಂತೆ ಮತ್ತೋರ್ವ ಪುತ್ರ ತಿ.ನರಸೀಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಿ.ನರಸೇಗೌಡ, ಪುತಿಯರಾದ ಶಾಂತಮ್ಮ, ಭಾಗ್ಯ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಈರಮ್ಮರವರು ಹಿರಿಯ ರಾಜಕಾರಣಿಗಳು, ಮಾಜಿ ಶಾಸಕರಾದ ದಿವಂಗತ ಕೆ.ಕೆಂಪೀರೇಗೌಡರ ಹಿರಿಯ ಸಹೋದರಿಯೂ ಕೂಡ ಹೌದು.

ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಅಶ್ವಿನ್ ಕುಮಾರ್, ಎಲ್.ನಾಗೇಂದ್ರ, ಮಾಜಿ ಶಾಸಕರಾದ ವಾಸು, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ, ಮೈಮುಲ್ ಮಾಜಿ ಅಧ್ಯಕ್ಷರುಗಳಾದ ಕೆ.ಉಮಾಶಂಕರ್, ಎಸ್.ರಾಮಕೃಷ್ಣೇಗೌಡ, ಮಾಜಿ ಮೂಡಾ ಅಧ್ಯಕ್ಷರಾದ ಪಿ.ಗೋವಿಂದರಾಜು, ಮಾಜಿ ಉಪ ಮೇಯರ್ ಸುರೇಶ್ ಬಾಬು, ಎಂ.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ಚಿಕ್ಕಳ್ಳಿ ಕುಮಾರ, ಬಿ.ಎನ್.ಸದಾನಂದ, ವಿವಿಧ ಕ್ಷೇತ್ರದ ಗಣ್ಯರುಗಳು ಸೇರಿದಂತೆ ಇನ್ನೂ ಅನೇಕ ಮಂದಿ ಮೃತರ ಅಂತಿಮ ದರ್ಶನ ಪಡೆದರು

ಮಾಜಿ ಸಚಿವರುಗಳಾದ ಪಿ.ಜಿ.ಆರ್ ಸಿಂಧ್ಯ ಮತ್ತು ಎಂ.ಸಿ.ನಾಣಯ್ಯ ರವರುಗಳು ಬಸವೇಗೌಡರಿಗೆ ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿ ಸಂತಾಪ ಸೂಚಿಸಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago