‘ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ
ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯು ಅಂಬೇಡ್ಕರ್ ಅವರ ಹೋರಾಟವನ್ನು ಮುನ್ನಡೆಸಲು ಹಾಗೂ ಪ್ರಸ್ತುತ ವಿದ್ಯಮಾನಗಳಿಗೆ ಪ್ರತ್ಯುತ್ತರ ನೀಡಲು ಚಳವಳಿ ರೂಪಿಸುವ ಉದ್ದೇಶದಿಂದ ಡಿ.೨೫ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಟೌನ್‌ಹಾಲ್‌ನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಮನುಸ್ಮತಿ ಸುಡುವ ಚಳವಳಿ ನಡೆಸುತ್ತಿದ್ದು,‘ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಹಾಗೂ ಪ್ರಸನ್ನ ತಳೂರು ತಿಳಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ ಮತ್ತು ದಸಂಸ ಎಲ್ಲ ಬಣಗಳ ಮುಖಂಡರುಗಳು ಭಾಗವಹಿಸಲಿದ್ದು, ದಸಂಸ ಹಿತೈಷಿಗಳು, ಕಾರ್ಯಕರ್ತರು, ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.
ಆರ್ಯರ ಆಕ್ರಮಣದ ನಂತರ ವ್ಯಕ್ತಿಯ ಹುಟ್ಟು ಮತ್ತು ಕಸನುಗಳನ್ನು ಆಧರಿಸಿ ಸಮಾಜವನ್ನು ವಿಭಜಿಸುವ ಮೊದಲ ದುಷ್ಟ ಕೆಲಸ ಪ್ರಾರಂಭವಾಯಿತು. ಹಾಗೆಯೇ ಋಗ್ವೇದದ ಅಂತ್ಯಭಾಗಕ್ಕೆ ಸೇರ್ಪಡೆಯಾದ ಪುರುಷ ಸೂಕ್ತಿ ವರ್ಣಾಶ್ರಮ ಪದ್ಧತಿಗೆ ಸಮರ್ಥನೆ ನೀಡಲು ಗ್ರಂಥದ ಮುಂದುವರಿದ ಭಾಗವಾಗಿ ಮನುಸ್ಮತಿಯೂ ಸೇರ್ಪಡೆಯಾಯಿತು. ಸಾವಿರಾರು ವರ್ಷಗಳಿಂದ ಭಾರತೀಯ ಸಮಾಜದ ಮೇಲೆ ಈ ಮನುಸ್ಮತಿ ಹೇರಿದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ, ಧಾರ್ಮಿಕ, ಅಮಾನವೀಯ ನೀತಿ ಸಂಹಿತೆಗಳು ಈ ದೇಶದ ಮೂಲ ನಿವಾಸಿಗಳ ಬಹು ಸಂಖ್ಯಾತ ದುಡಿಯುವ ವರ್ಗಗಳ ಹೀನಾಯ ಬದುಕಿಗೆ ಕಾರಣವಾಯಿತು. ಶಿಕ್ಷಣ, ಸಮಾನತೆ, ಸ್ವಾತಂತ್ರ್ಯ, ಆರ್ಥಿಕ ಸ್ವಾವಲಂಬನೆಗಳಿಂದ ವಂಚಿಸಿ ಬಲಿ ತೆಗೆದುಕೊಂಡಿತು. ಹಾಗಾಗಿ ಮನುಸ್ಮತಿ ಸುಡುವ ಚಳವಳಿ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…