ಜಿಲ್ಲೆಗಳು

ಮೈಸೂರು : ಮನುಸ್ಮತಿ ಸುಡುವ ಚಳವಳಿ ನಾಳೆ

ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯು ಅಂಬೇಡ್ಕರ್ ಅವರ ಹೋರಾಟವನ್ನು ಮುನ್ನಡೆಸಲು ಹಾಗೂ ಪ್ರಸ್ತುತ ವಿದ್ಯಮಾನಗಳಿಗೆ ಪ್ರತ್ಯುತ್ತರ ನೀಡಲು ಚಳವಳಿ ರೂಪಿಸುವ ಉದ್ದೇಶದಿಂದ ಡಿ.೨೫ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಟೌನ್‌ಹಾಲ್‌ನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಮನುಸ್ಮತಿ ಸುಡುವ ಚಳವಳಿ ನಡೆಸುತ್ತಿದ್ದು,‘ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಹಾಗೂ ಪ್ರಸನ್ನ ತಳೂರು ತಿಳಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ ಮತ್ತು ದಸಂಸ ಎಲ್ಲ ಬಣಗಳ ಮುಖಂಡರುಗಳು ಭಾಗವಹಿಸಲಿದ್ದು, ದಸಂಸ ಹಿತೈಷಿಗಳು, ಕಾರ್ಯಕರ್ತರು, ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.
ಆರ್ಯರ ಆಕ್ರಮಣದ ನಂತರ ವ್ಯಕ್ತಿಯ ಹುಟ್ಟು ಮತ್ತು ಕಸನುಗಳನ್ನು ಆಧರಿಸಿ ಸಮಾಜವನ್ನು ವಿಭಜಿಸುವ ಮೊದಲ ದುಷ್ಟ ಕೆಲಸ ಪ್ರಾರಂಭವಾಯಿತು. ಹಾಗೆಯೇ ಋಗ್ವೇದದ ಅಂತ್ಯಭಾಗಕ್ಕೆ ಸೇರ್ಪಡೆಯಾದ ಪುರುಷ ಸೂಕ್ತಿ ವರ್ಣಾಶ್ರಮ ಪದ್ಧತಿಗೆ ಸಮರ್ಥನೆ ನೀಡಲು ಗ್ರಂಥದ ಮುಂದುವರಿದ ಭಾಗವಾಗಿ ಮನುಸ್ಮತಿಯೂ ಸೇರ್ಪಡೆಯಾಯಿತು. ಸಾವಿರಾರು ವರ್ಷಗಳಿಂದ ಭಾರತೀಯ ಸಮಾಜದ ಮೇಲೆ ಈ ಮನುಸ್ಮತಿ ಹೇರಿದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ, ಧಾರ್ಮಿಕ, ಅಮಾನವೀಯ ನೀತಿ ಸಂಹಿತೆಗಳು ಈ ದೇಶದ ಮೂಲ ನಿವಾಸಿಗಳ ಬಹು ಸಂಖ್ಯಾತ ದುಡಿಯುವ ವರ್ಗಗಳ ಹೀನಾಯ ಬದುಕಿಗೆ ಕಾರಣವಾಯಿತು. ಶಿಕ್ಷಣ, ಸಮಾನತೆ, ಸ್ವಾತಂತ್ರ್ಯ, ಆರ್ಥಿಕ ಸ್ವಾವಲಂಬನೆಗಳಿಂದ ವಂಚಿಸಿ ಬಲಿ ತೆಗೆದುಕೊಂಡಿತು. ಹಾಗಾಗಿ ಮನುಸ್ಮತಿ ಸುಡುವ ಚಳವಳಿ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago