Mysore
25
overcast clouds
Light
Dark

ಮೈಸೂರು – ನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ : ಸಿದ್ದರಾಮಯ್ಯ

ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ, ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮುಂದುವರಿದು,  ಸಂಜೆ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಸಭೆ ಕರೆದಿದ್ದೇನೆ. ಅಲ್ಲಿ ಪಾಲಿಕೆ ಮೇಯರ್ ವಿಚಾರವನ್ನು ಅಲ್ಲಿ ಚರ್ಚೆ ಮಾಡುತ್ತೇನೆ, ಬಿಜೆಪಿ ಜೆ.ಡಿ.ಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ.ಅವರು ಏನನ್ನು ಬೇಕಾದರು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಇನ್ನೂ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ಕುರಿತು ಮಾತನಾಡಿದ ಅವರು ಮಹಾಜನ್ ವರದಿಯೇ ಅಂತಿಮವಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.ನ್ಯಾಯಾಂಗ ತೀರ್ಪು ಪುನರ್ ವಿಮರ್ಶೆಗೆ ಮಹಾರಾಷ್ಟ್ರದವರು ಕೇಳಿದ್ದಾರೆ ನಮ್ಮ ಸರ್ಕಾರದವರೂ ಸಿದ್ಧತೆ ಮಾಡಿಕೊಂಡಿದ್ದಾರೆ. ಮಹಾಜನ್‌ ಯಾವ ರಾಜ್ಯದವರು ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಮಳೆಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆರೆ, ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ.
ಇದರಿಂದ ಮನೆ, ರಸ್ತೆಗಳಿಗೆ ನೀರು ನುಗ್ಗುತ್ತಿದೆ.ನಮ್ಮ ಸರ್ಕಾರ ಇದ್ದಾಗ ರಾಜಕಾಲುವೆ ಒತ್ತುವರಿ ತೆರವಿಗೆ ಚಾಲನೆ‌ ಕೊಟ್ಟಿದ್ದೆವು, ಬಿಜೆಪಿ ಅವರು ಅಧಿಕಾರಕ್ಕೆ ಬಂದು ಮೂರೂವರೆ ವರ್ಷವಾದರೂ ಏನು ಮಾಡಲಿಲ್ಲ.
ಐಟಿ, ಬಿಟಿ ಅವರಿಗೆ ಸರಿಯಾದ ಮೂಲಸೌಕರ್ಯ ಬೇಕು ಈ ಬಗ್ಗೆ ಈ ಸರ್ಕಾರದವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ, ಇದರಿಂದಾಗಿ ಐಟಿ, ಬಿಟಿ ಕಂಪನಿಗಳು ಬೇರೆಡೆ ಹೋಗುತ್ತಿದ್ದಾರೆ  ಎಂದು ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ