ಜಿಲ್ಲೆಗಳು

ಸೌಲಭ್ಯಗಳಿಲ್ಲದ ಮೈಸೂರಿನ ಮಿನಿ ವಿಧಾನಸೌಧ

ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು…., ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು…!

-ಪ್ರಶಾಂತ್ ಎಸ್. ಮೈಸೂರು

ಮೈಸೂರು: ಧೂಳು ಹಿಡಿದಿರುವ ರೂಮ್‌ಗಳು.. ಎಲ್ಲೆಂದರಲ್ಲಿ ಬಿಸಾಡಿರುವ ಬಾಟಲಿಗಳು… ನೀರಿನ ವ್ಯವಸ್ಥೆ ಇಲ್ಲದೆ ಗಬ್ಬೆದ್ದು ನಾರುತ್ತಿರುವ ಶೌಚಾಲಯಗಳು…. ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಅಡ್ಡಾದಿಡ್ಡಿಯಾಗಿ ನಿಲ್ಲುವ ಬೈಕ್‌ಗಳು…!
ಇವು ಮೈಸೂರು ತಾಲ್ಲೂಕು ಕಚೇರಿ ಇರುವ ಮಿನಿ ವಿಧಾನಸೌಧದಲ್ಲಿ ಕಂಡುಬರುವ ದೃಶ್ಯಗಳು. ತಾಲ್ಲೂಕಿನ ಜನತೆ ತಮ್ಮ ಕೆಲಸ-ಕಾರ್ಯಗಳಿಗಾಗಿ ನಿತ್ಯ ಬಂದು ಹೋಗುವ ಈ ಕಚೇರಿ ಕಟ್ಟಡದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛತಾ ಅಭಿಯಾನವನ್ನೇ ಅಣಕಿಸುವಂತಿದೆ ಮೈಸೂರಿನ ತಾಲ್ಲೂಕು ಕಚೇರಿ.
ನಜರಬಾದ್ ರಸ್ತೆಯಲ್ಲಿರುವ ಮಿನಿ ವಿಧಾನಸೌಧದ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲು ಸೂಕ್ತ ಜಾಗವಿಲ್ಲದೆ ಸಾರ್ವಜನಿಕರು ಅಡ್ಡಾದಿಡ್ಡಿ ವಾಹನ ನಿಲುಗಡೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಮತ್ತು ಮೂಲ ಸೌಕರ್ಯಗಳಿಲ್ಲದೆ ಪರದಾಡುವಂತಾಗಿದೆ ಎಂದು ಕಚೇರಿಗೆ ಬರುವ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ.
ತಹಸಿಲ್ದಾರ್ ಕಚೇರಿಯೂ ಸೇರಿದಂತೆ ಇದೇ ಕಟ್ಟಡದಲ್ಲಿ ಉಪ ನೋಂದಣಾಧಿಕಾರಿಗಳ ಕಚೇರಿಯಿದ್ದು, ಇಲ್ಲಿಗೆ ಪ್ರತಿನಿತ್ಯ ಆಸ್ತಿ ನೋಂದಣಿ ಹಾಗೂ ಇನ್ನಿತರೆ ಕೆಲಸಗಳಿಗೆ ಸಾರ್ವಜನಿಕರು ಹೆಚ್ಚಾಗಿ ಬರುತ್ತಾರೆ. ಉಪ ನೋಂದಣಾಧಿಕಾರಿ ಕಚೇರಿಯ ದಾಖಲೆಗಳನ್ನು ಸಿದ್ಧಪಡಿಸಿ ಜನರಿಗೆ ನೀಡುವ ಸ್ಟ್ಯಾಂಪ್ ವೆಂಡರ್‌ಗಳು ಬೀದಿಯಲ್ಲಿ ಕುಳಿತು ಸಾರ್ವಜನಿಕರ ಕೆಲಸ ಮಾಡಿಕೊಡುತ್ತಿದ್ದಾರೆ. ಇವರಿಗೂ ಸೂಕ್ತ ವ್ಯವಸ್ಥೆ ಇಲ್ಲ. ಕಂದಾಯ, ರೇಷ್ಮೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಪ ಖಜಾನೆ ಸೇರಿದಂತೆ ಕೆಲವು ಪ್ರಮುಖ ಇಲಾಖೆಗಳು ಇದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.
ಇಲ್ಲಿ ಸಾರ್ವಜನಿಕ ಶೌಚಾಲಯವಿದ್ದರೂ ಈವರೆಗೆ ಜನರ ಬಳಕೆಗೆ ಲಭ್ಯವಾಗಿಲ್ಲ. ಪಾರ್ಕಿಂಗ್ ಮಾಡುವ ವಾಹನಗಳ ಪೈಕಿ ಬಹುಪಾಲು ದ್ವಿಚಕ್ರ ವಾಹನ ಸವಾರರು ಕಾಂಪೌಂಡ್ ಹೊರಗೆ ಮತ್ತಷ್ಟು ಜನರು ರಸ್ತೆಯ ಮಧ್ಯೆ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಕುಳಿತು ಕೊಳ್ಳುವ ಆಸನ ಸೇರಿದಂತೆ ಅನೇಕ ಸಮಸ್ಯೆಗಳು ಸಾರ್ವಜನಿಕರನ್ನು ಕಾಡುತ್ತಿದೆ.

ದುಸ್ಥಿತಿಯಲ್ಲಿರುವ ಶೌಚಾಲಯ ಕಟ್ಟಡಗಳು: ಮಹಿಳೆಉಯರ ಶೌಚಾಲಯ ಇದ್ದರೂ ಸದಾ ಬೀಗ ಹಾಕಿದ ಸ್ಥಿತಿಯಲ್ಲಿರುವುದರಿಂದ ಉಪಯೋಗಕ್ಕೆ ಬಾರದಂತಾಗಿದೆ. ಇಲ್ಲಿ ಸ್ವಚ್ಛತೆ ಎಂಬುದು ದೂರದ ಮಾತಾಗಿದೆ. ಸ್ವಚ್ಛತೆ ಅಸಮರ್ಪಕ ನಿರ್ವಹಣೆಯಿಂದ ಮಿನಿ ವಿಧಾನಸೌಧಕ್ಕೆ ತಮ್ಮ ಕೆಲಸಗಳ ನಿಮಿತ್ತ ಬರುವ ಸಾರ್ವಜನಿಕರು ಪ್ರತಿದಿನವೂ ಸ್ಥಳೀಯ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.


ಸಾರ್ವಜನಿಕರು ಕುಡಿಯುವ ನೀರಿಗೆ ತೊಂದರೆ ಎದುರಿಸುತ್ತ್ತಿದ್ದು, ಹೋಟೆಲ್‌ಗಳ ಮೊರೆ ಹೋಗುವಂತಾಗಿದೆ. ನಗರದ ವಿವಿಧೆಡೆಯಿಂದ, ದೂರದ ಊರುಗಳಿಂದ ನಡೆದು ಬರುವ ಸಾರ್ವಜನಿಕರು ಮತ್ತು ಸಿಬ್ಬಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ತಹಸಿಲ್ದಾರರು ಕ್ರಮ ಕೈಗೊಳ್ಳಬೇಕು.
-ಪೈ.ದೀಪಕ್ ಕಿರಣ್, ಮೈಸೂರು.


ಈ ಸಮಸ್ಯೆಗಳು ಈಗಾಗಲೇ ಗಮನಕ್ಕೆ ಬಂದಿದ್ದು, ಪಾರ್ಕಿಂಗ್ ಮಾಡಲು ಬದಲಿ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರು ಓಡಾಡಲು ಅನುಕೂಲ ಮಾಡಿಕೊಡುತ್ತೇವೆ. ಜತೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡುತ್ತಿದ್ದೇವೆ. ಶೌಚಾಲಯವನ್ನು ಸಾರ್ವಜನಿಕರು ಉಪಯೋಗಿಸಿದ ಬಳಿಕ ನೀರು ಹಾಕದೇ ಇರುವುದರಿಂದ ಸಮಸ್ಯೆ ಉಂಟಾಗುತ್ತಿದೆ. ಇವೆಲ್ಲಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸುತ್ತೇವೆ.
-ಬಿ.ಎನ್.ಗಿರೀಶ್, ತಹಸಿಲ್ದಾರ್.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

7 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

8 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

23 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago