ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ
ಬಿ.ಎನ್.ಧನಂಜಯಗೌಡ
ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಪಂಚದ ಮೂಲೆ ಮೂಲೆಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಸುಮಾರು ೩ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.
ಮೇಲ್ಚಾವಣಿ ಕುಸಿದಿತ್ತು : ಎರಡು ವರ್ಷದ ಹಿಂದೆ ಇದೇ ಕಾಲೇಜಿನ ಆವರಣದಲ್ಲಿ ಇರುವ ಕ್ರಿಮಿನಾಲಜಿ ತರಗತಿಗಳು ನಡೆಯುವ ಕೊಠಡಿಯೊಂದರ ಮೇಲ್ಚಾವಣಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿತ್ತು.
ತಜ್ಞರ ಅಸಮಾಧಾನ: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿಯುತ್ತಿದ್ದಂತೆ ನಗರದ ಪಾರಂಪರಿಕ ಕಟ್ಟಡಗಳ ಪರಿಶೀಲನೆ ನಡೆಸಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಸದಸ್ಯರು ಮಹಾರಾಜ ಕಾಲೇಜಿಗೂ ಭೇಟಿ ನೀಡಿ ಪರಿಶೀಲಿಸಿದ್ದು, ಕಟ್ಟಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವ ಬಗ್ಗೆ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಾರಾಜ ಕಾಲೇಜು ಇತಿಹಾಸ:
* ಮುಮ್ಮಡಿ ಕೃಷ್ಣರಾಜ ಒಡೆಯರ್ ೧೮೩೩ರಲ್ಲಿ ಸ್ಥಾಪಿಸಿದ ‘ರಾಜಾಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಈ ಕಾಲೇಜಿನ ಮೂಲ
*೧೦ನೇ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಈಗಿರುವ ಜಾಗದಲ್ಲಿ ೧೮೮೯ರಲ್ಲಿ ಈಗಿನ ಕಟ್ಟಡ ನಿರ್ಮಾಣ
* ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಿರುವ ಕಟ್ಟಡ ಇದಾಗಿದೆ
ಕಾಲೇಜಿನಲ್ಲಿ ಓದಿದ ಪ್ರಸಿದ್ಧರು
ಕುವೆಂಪು, ಜಿ.ಎಸ್.ಶಿವರುದ್ರಪ್ಪ, ಆರ್.ಕೆ.ನಾರಾಯಣ್, ಆರ್.ಕೆ.ಲಕ್ಷ್ಮಣ್, ಯು.ಆರ್.ಅನಂತಮೂರ್ತಿ, ಪಿ.ಲಂಕೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ದೇವನೂರು ಮಹಾದೇವ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಬಿ. ಪಿ.ಶೌರಿ, ಶ್ರೀಕೃಷ್ಣ ಆಲನಹಳ್ಳಿ, ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಬಂಗಾರಪ್ಪ, ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ ಹೀಗೆ ಇನ್ನು ಅನೇಕರು ಈ ಕಾಲೇಜಿನಲ್ಲಿ ಓದಿ ಪ್ರಸಿದ್ಧರಾಗಿದ್ದಾರೆ.
ಮುಮ್ಮಡಿ ಕೃಷ್ಣರಾಜ ಒಡೆಯರು ೧೮೩೩ರಲ್ಲಿ ‘ರಾಜಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಆರಂಭಿಸಿದರು. ಆನಂತರದ ದಿನಗಳಲ್ಲಿ ಮಹಾರಾಜ ಕಾಲೇಜಾಗಿ ಆಗಿ ಬೆಳೆಯಿತು. ೧೮೮೯ರಲ್ಲಿ ಮಹಾರಾಜ ಕಾಲೇಜು ಕಟ್ಟಡವನ್ನು ಸ್ಥಾಪಿಸಲಾಯಿತು.
– ಈಚನೂರು ಕುಮಾರ್, ಇತಿಹಾಸ ತಜ್ಞ
-ಪ್ರೊ.ಅನಿತಾ ವಿಮ್ಲಾ ಬ್ರಾಗ್ಸ್, ಪ್ರಾಂಶುಪಾಲರು, ಮಹಾರಾಜ ಕಾಲೇಜು
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…