ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ೧೧ ಕೈದಿಗಳಿಗೆ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೆ.ಸಿ.ದಿವ್ಯಶ್ರೀ ಅವರು ಬಿಡುಗಡೆ ಪತ್ರ ನೀಡಿ, ಉತ್ತಮ ಜೀವನ ನಡೆಸಲು ಶುಭ ಹಾರೈಸಿದರು.
೭೫ನೇ ಸ್ವಾತಂತ್ರ್ಯ ದಿನಾಚರಣೆಯ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಎರಡನೇ ಹಂತದಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಬಿಡುಗಡೆಯಾಗಿದ್ದು, ಮೊದಲ ಹಂತದಲ್ಲಿ ಅಂದರೆ ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ೨೦ ಮಂದಿ ಕೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಕೇಂದ್ರದ ಸಹಾಯಕ ಅಧೀಕ್ಷಕ ವಿಜಯ ಎಸ್. ರೋಡರ್, ಜೈಲರ್‌ಗಳಾದ ಕೆ.ಎಚ್.ವರದರಾಜು, ಎಂ.ಡಿ.ಧರಣೇಶ, ಅಮರ್ ಹುಲ್ಲೋಳಿ, ಗೀತಾ ಮಾಲಗಾರ ಇದ್ದರು.
ಬಿಡುಗಡೆಯಾದವರು: ಚಾಮರಾಜನಗರದ ಎಂ. ನಾಗರಾಜಪ್ಪ, ಹಾಸನದ ದೊರೆಸ್ವಾಮಿ, ಮಡಿಕೇರಿಯ ರಘು, ಬಿ.ಕೆ.ಜಗದೀಶ, ಹುಣಸೂರಿನ ಸ್ವಾಮಿ ಗೌಡ, ಚಿತ್ರದುರ್ಗದ ಮಹಾಂತೇಶ್, ಮದ್ದೂರಿನ ಲಂಕೇಶ, ಶ್ರೀರಂಗಪಟ್ಟಣದ ನಾಗರಾಜು, ಸೋಮವಾರಪೇಟೆಯ ಸಿ.ಟಿ.ಜೇಮ್ಸ್, ಮೈಸೂರಿನ ಶ್ರೀಕಂಠಾರಾಧ್ಯ, ತೆಂಜಿನ್ ಬಿಡುಗಡೆಯಾಗಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…