ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿಯೇ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆಯನ್ನು ಅಧಿಕೃತ ಆಹ್ವಾನದ ವೇಳೆ ಉಡುಗೊರೆಯಾಗಿ ಕೊಡಲಾಗಿತ್ತು.
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಮೈಸೂರು ರೇಶ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.
ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಿದ್ದರು. ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ಸ್ಥಾಪಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ. ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು. ಹಾಗಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಶ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.
ಮೈಸೂರು ಸೀರೆ ಉಟ್ಟು ಮೈಸೂರು ದಸರೆಯನ್ನು ಉದ್ಘಾಟಿಸಿದ ರಾಷ್ಟ್ರಪತಿಯವರ ನಡೆ ಮೈಸೂರಿಗರು ಮಾತ್ರವಲ್ಲ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…