Mysore
14
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಮೈಸೂರು ರಿಂಗ್ ರಸ್ತೆ : ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರ ಕೈಚಳಕ

ಮೈಸೂರು: ಸಂಸದ ಪ್ರತಾಪ್ ಸಿಂಹ  ಅವರು ನವೆಂಬರ್ 30 ರೊಳಗೆ ಮೈಸೂರಿನ ರಿಂಗ್ ರಸ್ತೆಗಳಿಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ವಾಗ್ದಾನ ಮಾಡಿದ್ದರು.

ಅದರಂತೆ ಮೈಸೂರು-ಬೆಂಗಳೂರು ರಸ್ತೆಯ ಜಂಕ್ಷನ್ ದೀಪಗಳನ್ನ ಬೆಳಗಿಸಲಾಗಿತ್ತು. ಆದರೆ ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.


ಸಾತಗಳ್ಳಿ ರಿಂಗ್ ರಸ್ತೆಯಲ್ಲಿ ಬೀದಿ ದೀಪ ಅಳವಡಿಸಿ ಎರಡೇ ದಿನಗಳಲ್ಲಿ ಎಂಸಿಬಿ ಸ್ವಿಚ್‌ಗಳನ್ನೇ ಕದ್ದೊಯ್ದಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತ ಪಡಿಸಿರುವ ಸಂಸದ ಪ್ರತಾಪ್ ಸಿಂಹ ಲೈಟು ಬೇಕು ಅಂದ್ರಿ, ಶ್ರಮಪಟ್ಟು ಹಾಕಿಸಿದೆ.

ಎರಡೇ ದಿನಗಳಲ್ಲಿ ಸಾತಗಳ್ಳಿ ಬಳಿ ಕಳ್ಳರ ಕಾಟ ಶುರುವಾಗಿದೆ. ಎಂಸಿಬಿ ಸ್ವಿಚ್ಸ್ ಕದ್ದು, ವಿದ್ಯುತ್ ಸಂಪರ್ಕ ತೆಗೆಯುತ್ತಿದ್ದಾರೆ. ಇಂದಿನಿಂದ ರಾತ್ರಿ ಗಸ್ತು ಆರಂಭಿಸುತ್ತಿದ್ದೇನೆ ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಇಂಡಿಯನ್ ಬ್ಯಾಂಕ್ ನಿಂದ 5 ಲಕ್ಷ ಡಿಡಿ ಕೊಡಿಸಿದೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!