ಮೈಸೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯಲ್ಲಿ, ಮೈಸೂರು ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳ ನಿರ್ವಹಣೆ ಸಂಬಂಧಿತವಾಗಿ ಸಿದ್ಧಪಡಿಸಿದ ಅಂದಾಜಿನ ಆಧಾರದ ಮೇಲೆ ದಸರದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಎಸ್.ಟಿ. ಸೋಮಶೇಖರ್ ತಿಳಿಸಿದರು.
ಅರಮನೆ ಮಂಡಳಿ ವತಿಯಿಂದ ಅರಮನೆ ಕಾರ್ಯಕ್ರಮಗಳಿಗೆ 5 ಕೋಟಿ ರೂ, ಜಿಲ್ಲಾಡಳಿತ ಮತ್ತು ಎಂ ಸಿ ಸಿ ಯು ಅಂದಾಜುಗಳನ್ನು ಪರಿಗಣಿಸಿ ಉಸ್ತವಗಳಿಗೆ ಯೋಚಿಸಲಾದ ಕಾರ್ಯಕ್ರಮಗಳ ಆಧಾರದ ಮೇಲೆ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸೂಚಿಸಿದರು.
ಕೋವಿಡ್- 19 ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅದ್ದೂರಿ ಆಚರಣೆ ಕಡಿಮೆಯಾಗಿದ್ದು ಈ ಬಾರಿ ದಸರಾದಲ್ಲಿ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸಲು ವ್ಯಾಪಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಮುಂದುವರಿದು ಚಾಮುಂಡಿ ಬೆಟ್ಟದ ಮೇಲೆ ದಸರಾ ಉತ್ಸವವನ್ನು ಉದ್ಘಾಟಿಸುವ ಬಗ್ಗೆ, ಗಣ್ಯರನ್ನು ಆಹ್ವಾನಿಸುವುದರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
ಶ್ರೀರಂಗಪಟ್ಟಣ ದಸರಾ ಹಾಗೂ ಚಾಮರಾಜನಗರ ದಸರಾ ಆಚರಣೆಗೆ ತಲಾ ಒಂದು ಕೋಟಿ ರೂ. ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣದಲ್ಲಿ ಜಂಬೂ ಸವಾರಿ ಗೆ ಮೂರು ಆನೆಗಳನ್ನು ಹುಡುಕಲಾಗಿದೆ ಎಂದರು.