ಮೈಸೂರು: ಮೈಸೂರು ಜಿಲ್ಲಾ ಕಿವುಡರ ಸಂಸ್ಥೆ ವತಿಯಿಂದ ಇತರೆ ಸಂಸ್ಥೆಗಳ ಸಹಯೋಗದೊಡನೆ ಸೆ. 18 ರಿಂದ 24 ರವರೆಗೆ ನಗರದ ಆರ್‌ಬಿಐ ಮೈದಾನದಲ್ಲಿ ಕಿವುಡರ ರಾಷ್ಟ್ರಮಟ್ಟದ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜಕರಲ್ಲಿ ಒಬ್ಬರಾದ ಹೇಮಂತ್‌ಚಂದ್ರ ಮಾತನಾಡಿ, ಪಂದ್ಯಾವಳಿಯಲ್ಲಿ ಚೆನ್ನಾಗಿ ಆಡಿದ ಆಟಗಾರರು ಮುಂಬರುವ ಜನವರಿಯಲ್ಲಿ ಕೇರಳದ ತಿರುವನಂತಪುರದಲ್ಲಿ ನಡೆಯುವ ವಿಶ್ವ ಕಿವುಡರ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ಸೆ.24 ರಂದು ಇಲ್ಲಿನ ವಿಜೇತ ತಂಡಗಳಿಗೆ ಬಹುಮಾನ ನೀಡಲಾಗುವುದು ಎಂದರು.
ಈ ಪಂದ್ಯಾವಳಿಯಲ್ಲಿ ದೇಶದಾದ್ಯಂತದಿಂದ ಪ್ರತಿಷ್ಠಿತ ತಂಡಗಳು ಆಗಮಿಸುತ್ತಿವೆ. ಹೀಗಾಗಿ ಕ್ರೀಡಾಸಕ್ತರು ಆಗಮಿಸಿ ವೀಕ್ಷಿಸಬೇಕೆಂದು ಮನವಿ ಮಾಡಿದರು. ಎಸ್.ಮೂರ್ತಿ, ಜೆ.ವಿ.ಮಹೇಶ್‌ವರ್ಮ, ನವೀನ್‌ಕುಮಾರ್. ಎ.ಗಣೇಶ್‌ರಾವ್ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…