ಮೈಸೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮೈಸೂರಿನ ನೈರುತ್ಯ ರೈಲ್ವೆಯ ರೈಲ್ವೆ ಮ್ಯೂಸಿಯಂನಲ್ಲಿ ಹೆಣ್ಣು ಮಕ್ಕಳಿಗೆ ಒಬ್ಬರು ಪೋಷಕರೊಂದಿಗೆ ಉಚಿತ ಪ್ರವೇಶ ನೀಡುತ್ತಿದೆ.
ಈ ಸೇವೆಯು ಮಂಗಳವಾರದಂದು ಅಂದರೆ ಜನವರಿ 24ರಂದು ಲಭ್ಯವಿದ್ದು ಒಂದು ಹೆಣ್ಣು ಮಗುವಿನ ಜೊತೆಗೆ ಒಬ್ಬ ಪೋಷಕರಿಗೆ ಉಚಿತ ಪ್ರವೇಶಾತಿಯನ್ನು ನೀಡಲಾಗುತ್ತಿದೆ.
ಅಂದಿನ ದಿನ ಮಂಗಳವಾರ ಮ್ಯೂಸಿಯಂ ಗೆ ನೀಡಲಾಗಿದ್ದ ರಜವನ್ನು ರದ್ದುಪಡಿಸಲಾಗಿದ್ದು. ಹೆಣ್ಣು ಮಕ್ಕಳ ಈ ದಿನಾಚರಣೆಯ ಪ್ರಯುಕ್ತ ಉಚಿತ ಪ್ರವೇಶ ನೀಡಲಾಗುತ್ತಿದೆ. ರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಭಾರತ ಸರ್ಕಾರ ಈ ದಿನವನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾಗಿ ಆಚರಣೆ ಮಾಡುತ್ತ ಬರುತ್ತಿದೆ. ಇದರ ಮುಖ್ಯ ಉದ್ದೇಶ ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಗೌರವ ಮತ್ತು ಪ್ರಗತಿಯತ್ತ ಕೊಂಡೊಯ್ಯುವುದು ಆಗಿದೆ. ಇದರೊಂದಿಗೆ ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸುವಂತಹ ಪ್ರಯತ್ನ ಇದಾಗಿದೆ.
ರೈಲ್ವೆ ಮ್ಯೂಸಿಯಂ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30ರ ವರೆಗೆ ಪ್ರವೇಶ ಅವಧಿಯಾಗಿರುತ್ತದೆ ಆಹಾರ ಪದಾರ್ಥಗಳನ್ನು ಮ್ಯೂಸಿಯಂ ನ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ ವೃತ್ತಿಪರ/DSLR ಬಳಸುವ ಫೋಟೋಗ್ರಾಫರ್ ಗಳು ನಿಗದಿತ ಶುಲ್ಕವನ್ನು ಪಾವತಿ ಮಾಡುವ ಮೂಲಕ ಮ್ಯೂಸಿಯಂ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ಇದರ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಮಂಜುನಾಥ್ ತಿಳಿಸಿದ್ದಾರೆ.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…