ಮೈಸೂರು : ನಗರದ ಮಾನಸ ಗಂಗೋತ್ರಿಯ ಲಲಿತಕಲಾ ಕಾಲೇಜಿನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಯುವ ಜನೋತ್ಸವ-2022 ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಮಂಗಳೂರು ವಿವಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಬಾಗಲಕೋಟೆ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾಲಯವು 3ನೇ ಸ್ಥಾನವನ್ನು ಹೊಂದಿದೆ.
ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ , ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯು ಇಂದು ಆಯೋಜನೆ ಮಾಡಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿಜೇತ ತಂಡ ಮತ್ತು ವಿದ್ಯಾರ್ಥಿಗಳಿಗೆ ಟ್ರೋಫಿ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಮೈಸೂರು ವಿವಿ ದ ಕುಲಸಚಿವ ಆರ್. ಶಿವಪ್ಪ, ಮಹಾರಾಜ ಕಾಲೇಜು ಪ್ರಾಂಶುಪಾಲರಾದ ಪ್ರೊ.ಅನಿಟ ವಿಮ್ಲಾ ಬ್ರ್ಯಾಗ್ಸ್ ವಿತರಿಸಿದರು.





