ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯು 4ನೇ ದಿನ್ಕೆಕ ಕಾಲಿಟ್ಟಿದ್ದು ತಟ್ಟೆ-ಲೋಟ ಬಡಿದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕುರುಬೂರು ಸಿದ್ದೇಶ್, ಯೋಗೇಶ, ಮಂಜು, ಹಾಡ್ಯ ರವಿ, ನಂಜುಂಡಪ್ಪ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





