ಮೈಸೂರು: ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕರ್ತವ್ಯದಲ್ಲಿದ್ದ ಟೆಕ್ಕಿಯೊಬ್ಬರು ಶನಿವಾರ ತಾನಿದ್ದ ಕೋಣೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಚೆನೈನ ರಾಹುಲ್ (27) ಎಂಬವರೇ ಸಾವಿಗೆ ಶರಣಾಗಿರುವ ವ್ಯಕ್ತಿ. ಮೂಲತಃ ತಮಿಳುನಾಡಿನವರಾದ ರಾಹುಲ್ ಅವರು, ನಗರದ ಎಲ್ ಆಂಡ್ ಟಿ ಕಂಪನಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲದೇ, ಹೆಬ್ಬಾಳದ ಮಾದೇಗೌಡ ವೃತ್ತದಲ್ಲಿ ರೂಮ್ ಮಾಡಿಕೊಂಡು ವಾಸವಿದ್ದರು. ಶನಿವಾರ ಮನೆಯವರಿಂದ ಸಾಕಷ್ಟು ಬಾರಿ ಕರೆ ಮಾಡಿದರೂ, ಕರೆಯನ್ನು ಸ್ವೀಕರಿಸದೆ ಇದ್ದಾಗ, ಮನೆಯವರು ಕಂಪನಿಯ ಎಚ್‌ಆರ್‌ಗೆ ಕರೆ ಮಾಡಿ, ಮಾಹಿತಿ ತಿಳಿಸಿದ್ದಾರೆ. ರಾತ್ರಿ 11.30ರ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶನಿವಾರ ಬೆಳಿಗ್ಗೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನಗರದ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…