ಮೈಸೂರು : ಪ್ರವಾಸೋಧ್ಯಮವನ್ನು ಅಭಿವೃದ್ಧಿಪಡಿಸುವ ಮತ್ತು ಧಾರ್ಮಿಕ ಪ್ರವಾಸಿ ಕ್ಷೇತ್ರಗಳಿಗೆ ತೆರಳುವ ಜನರಿಗೆ ಹೆಚ್ಚಿನ ಅನುಕೂಲವನ್ನು ಮಾಡಿಕೊಡು ವ ಉದ್ದೇಶದಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನಿಂದ ಗೋವಾ ಕ್ಕೆ ರೈಲು ಪ್ರಯಾಣವನ್ನು ಕಲ್ಪಿಸುವಂತೆ ಒತ್ತಾಯಿಸಿ ಇಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮೈಸೂರು ರೈಲ್ವೆ ಹೋರಾಟ ಸಮಿತಿಯ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಮಹೇಶ್ ಕಾಮತ್, ರಘುವೀರ್ ಪುರಾಣಿಕ್, ಜಗದೀಶ್ ಹೆಬ್ಬಾರ್, ರಾಕೇಶ್ ಭಟ್ ಮುಂತಾದವರು ಉಪಸ್ಥಿತರಿದ್ದರು.