ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಸ್- 22’ಕ್ಕೆ ಶನಿವಾರ ಚಾಲನೆ ದೊರೆಯಲಿದೆ.
ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ ಹೊಂದಿದ ಅಂತರಾಷ್ಟ್ರೀಯ ಕಾರ್ಯಕ್ರಮ ‘ಅನ್ ಲೀಷ್- 22’ ಕ್ಕೆ ಸಾಕ್ಷಿಯಾಗಲು ಅರಮನೆ ನಗರಿ ಸ್ವಜ್ಜಾಗಿದೆ. ಒಂದು ವಾರ ಕಾಲ ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಶನಿವಾರ (ಡಿಸೆಂಬರ್ 3) ಮಧ್ಯಾಹ್ನ ನೆರವೇರಲಿದ್ದು, ಗ್ರೀನ್ ಲ್ಯಾಂಡ್ ಪ್ರಧಾನ ಮಂತ್ರಿ ಮ್ಯೂಟೆ ಬೌರುಪ್ ಎಜೆಡೆ ಅವರು ಉದ್ಘಾಟನಾ ಕಾರ್ಯಕ್ರಮವನನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಲಿದ್ದಾರೆ. ಐಟಿ/ಬಿಟಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಅವರು ಸ್ವಾಗತ ಭಾಷಣ ಮಾಡಲಿದ್ದಾರೆ.
ಪ್ರಪಂಚದ 101 ರಾಷ್ಟ್ರಗಳ 993 ಪ್ರತಿಭಾವಂತ ತಂತ್ರಜ್ಞರು, ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಪೈಕಿ, 515 ಜನ ವಿದೇಶಗಳಿಗೆ ಸೇರಿದವರಾಗಿದ್ದರೆ, 478 ಜನ ಭಾರತೀಯರು. ಇವರಲ್ಲಿ ಸ್ಟಾರ್ಟಪ್ ಸಿಟಿ ಬೆಂಗಳೂರಿನ 90 ಮಂದಿ ಹಾಗೂ ಬೆಂಗಳೂರಿಗೆ ಹೊರತಾದ ಭಾಗದ 19 ಮಂದಿ ಇದ್ದಾರೆ.
ಉತ್ತಮ ಆರೋಗ್ಯ ಮತ್ತು ಸ್ವಾಸ್ಥ್ಯ,ಗುಣಮಟ್ಟದ ಶಿಕ್ಷಣ, ಶುದ್ಧನೀರು ಹಾಗೂ ನೈರ್ಮಲ್ಯ, ಸುಲಭ ದರದ ಸ್ವಚ್ಛ ಇಂಧನ, ಹವಾಮಾನ ವೈಪರೀತ್ಯ ಇವು ಕಾರ್ಯಕ್ರಮದ ಮುಖ್ಯ ವಿಷಯಗಳಾಗಿರುತ್ತವೆ. ಪಾಲ್ಗೊಳ್ಳುವ ಅಭ್ಯರ್ಥಿಗಳನ್ನು ಸಣ್ಣ ಸಣ್ಣ ಗುಂಪುಗಳನ್ನಾಗಿ ಮಾಡಿ ಸುಸ್ಥಿರ ಬೆಳವಣಿಗೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅವರ ಮುಂದಿಟ್ಟು ಸಮರ್ಥ ಪರಿಹಾರಗಳನ್ನು ಕಂಡುಹಿಡಿಯುವ ಸವಾಲನ್ನು ಒಡ್ಡಲಾಗುತ್ತದೆ. ಅಭ್ಯರ್ಥಿಗಳು ವಾರದ ಕೊನೆಯ ವೇಳೆಗೆ ಪರಿಹಾರದ ಕಾರ್ಯ ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸಬೇಕಾಗುತ್ತದೆ.
ಅನ್ ಲೀಷ್ ಅಧ್ಯಕ್ಷ ಪ್ರೊಫೆಸರ್ ಫ್ಲೆಮಿಂಗ್, ಇನ್ಫೋಸಿಸ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸುಮಿತ್ ವೀರಮಣಿ, ಐಟಿ/ ಬಿಟಿ ಇಲಾಖೆಯ ಎಸಿಎಸ್ ರಮಣ ರೆಡ್ಡಿ, ಅಟಲ್ ಇನ್ನೋವೇಶನ್ ಅಭಿಯಾನದ ನಿರ್ದೇಶಕ ಡಾ. ಚಿಂತನ್ ವೈಷ್ಣವ್ ಮೈಸೂರು ರಾಜ ವಂಶಸ್ಥ ಯದುವೀರ ಕೃಷ್ಣರಾಜ ಚಾಮರಾಜ ಒಡೆಯರ್ ಇನ್ನಿತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…
ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…