ಜಿಲ್ಲೆಗಳು

ಮೈಸೂರು ವಿವಿ ವಿಭಜನೆ : ಏನು ಪ್ರಯೋಜನ?

ಹೊಸ ವಿಷಯಗಳು, ಸಂಶೋಧನೆಗೆ ಅನುಕೂಲ ಸಾಧ್ಯತೆ: ದಿಢೀರ್ ನಿರ್ಧಾರದಿಂದ ಕಟ್ಟುವ ಪ್ರಕ್ರಿಯೆ ವಿಳಂಬ ಎಂಬ ಅಭಿಪ್ರಾಯ

ಮೈಸೂರು: ಬೆಂಗಳೂರು ಕೇಂದ್ರಿತ ವಿವಿಯನ್ನು ನಾಲ್ಕು ವಿಶ್ವವಿದ್ಯಾನಿಲಯಗಳಾಗಿ ವಿಂಗಡಿಸಿದ್ದ ಸರ್ಕಾರ, ಶತಮಾನದ ಹಿನ್ನೆಲೆಯ ಮೈಸೂರು ವಿಶ್ವವಿದ್ಯಾನಿಲಯವನ್ನೂ ವಿಭಜಿಸಿದೆ. ಈ ಮೂಲಕ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಆದರೆ ಮೂಲಸೌಕರ್ಯ, ಅಧ್ಯಾಪಕ- ಅಧ್ಯಾಪಕೇತರರ ನೇಮಕ, ಶೈಕ್ಷಣಿಕ ವಾತಾವರಣ ನಿರ್ಮಾಣ ಹೇಗಿರಬಹುದು, ಎಷ್ಟು ದಿನ ಬೇಕಾಗಬಹುದು ಎನ್ನುವ ಚರ್ಚೆಯನ್ನು ಹುಟ್ಟು ಹಾಕಿದೆ.

ಶತಮಾನದ ಹೆಗ್ಗಳಿಕೆಯ ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿ ವಿಸ್ತಾರವಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕೇಂದ್ರ ಸ್ಥಾನವಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಲವು ಜಿಲ್ಲೆಗಳಲ್ಲಿ ಮೈಸೂರು ವಿವಿಯು ಸ್ನಾತಕೋತ್ತರ ಪದವಿ ಕೇಂದ್ರಗಳನ್ನು ತೆರೆದಿದೆ. ಇದು ಒಂದು ರೀತಿಯಲ್ಲಿ ವಿವಿಗೆ ಕಾರ್ಯಭಾರದ ಹೊರೆಯನ್ನೂ ಹೆಚ್ಚಳ ಮಾಡಿತ್ತು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕರು, ಬೋಧಕೇತರ ಸಿಬ್ಬಂದಿ, ಮೂಲಸೌಲಭ್ಯಗಳನ್ನು ಒದಗಿಸುವುದು ದುಸ್ತರವಾಗಿತ್ತು. ಆದರೂ ವಿವಿಯು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿತ್ತು. ರಾಜ್ಯ ಸರ್ಕಾರ ಮೈಸೂರು ವಿವಿಯ ವಿಭಜನೆಗೆ ಮುಂದಾಗಿದ್ದು, ಹಳೆ ಮೈಸೂರು ಭಾಗದ ಜಿಲ್ಲೆಗಳೇ ಆಗಿರುವ ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ನೂತನ ವಿವಿಗಳ ಸ್ಥಾಪನೆಗೆ ತೀರ್ಮಾನಿಸಿದೆ.

ಮಂಡ್ಯದಲ್ಲಿ ಎರಡು ವರ್ಷಗಳ ಹಿಂದೆೆುೀಂ ಶುರುವಾಗಿರುವ ಹೊಸ ವಿವಿಯ ಅಭಿವೃದ್ಧಿಗೆ ಸಿದ್ಧತೆ ನಡೆಸಿದೆ.
ಮೈಸೂರು ವಿವಿಯು ಮಂಡ್ಯ ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಈಗಾಗಲೇ ಸ್ನಾತಕೋತ್ತರ ಪದವಿ ಕೇಂದ್ರಗಳನ್ನು ತೆರೆದು ಹಲವು ವಿಷಯ ಅಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಅತ್ತ ಕೊಡಗು ಜಿಲ್ಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಸ್ನಾತಕೋತ್ತರ ಪದವಿ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳ ಆಡಳಿತಾಧಿಕಾರಿಗಳು ಕೂಡ ವಿದ್ಯಾರ್ಥಿಗಳ ಸಂಖ್ಯೆ, ಮೂಲ ಸೌಕರ್ಯ ಕಲ್ಪಿಸುವುದು ಇತ್ಯಾದಿ ಕಾರ್ಯಗಳಿಗೆ ಸಂಬಂಧಪಟ್ಟ ಅನುಮತಿ ಪಡೆಯುವುದು ಅನಿವಾರ್ಯವಾಗಿತ್ತು. ಅದು ಸಹಜ ಕೂಡ.
ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಮ್ಮತಿ ನೀಡಿದೆ. ಇದು ಕಾರ್ಯಭಾರ, ಆಡಳಿತದ ಹೊಣೆಗಾರಿಕೆಗಳಿಂದ ನಲುಗಿ ಹೋಗಿದ್ದ ಮೈಸೂರು ವಿವಿಗೆ ನೆಮ್ಮದಿ ತಂದಿದೆ ಎನ್ನಬಹುದು. ಸರ್ಕಾರದ ನಿರ್ಧಾರದಿಂದ ಮೈಸೂರು ವಿವಿಯು ಹೊಸ ನೋಟದೊಂದಿಗೆ ಸಂಶೋಧನೆಗಳು ಹಾಗೂ ನೂತನ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಗಮನ ಹರಿಸಲು ಅವಕಾಶಗಳನ್ನು ಕಲ್ಪಿಸಿದಂತಾಗಿದೆ.

‘ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವುದು ಒಳ್ಳೆಯದು. ಆದರೆ, ಸ್ಥಾಪಿಸುವ ವಿಧಾನ ಸರಿಯಿಲ್ಲ. ಒಂದು ವಿಶ್ವವಿದ್ಯಾನಿಲಯವನ್ನು ಸ್ಥಾಪನೆ ಮಾಡಿ, ಅದರ ಅಭಿವೃದ್ಧಿಗೆ ಪೂರಕವಾದ ವಾತಾವರಣ ಉಂಟು ಮಾಡಬೇಕು ಎಂದರೆ ಸಾಕಷ್ಟು ಹಣವನ್ನು ಮೀಸಲಿಡಬೇಕಾಗುತ್ತದೆ. ಒಂದೇ ಬಾರಿಗೆ ಮೂರ್ನಾಲ್ಕು ವಿವಿಗಳನ್ನು ಮಾಡುವ ಬದಲು, ಹಂತ ಹಂತವಾಗಿ ವಿವಿಗಳನ್ನು ಸ್ಥಾಪಿಸಬೇಕಿತ್ತು. ವಿವಿಗಳಿಗೆ ಹಿಂದೆಲ್ಲ ಅನುದಾನಗಳು ಸಮರ್ಪಕವಾಗಿ ಸಿಗುತ್ತಿತ್ತು. ಈಗ ನೀಡುವ ಅನುದಾನ ಸಾಕಾಗುತ್ತಿಲ್ಲ. ಹಾಗಾಗಿ, ಆರ್ಥಿಕ ಹೊರೆಯನ್ನು ಗಮನದಲ್ಲಿ ಇಟ್ಟುಕೊಂಡು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಬೇಕು’ ಎಂದು ಸಲಹೆ ನೀಡುತ್ತಾರೆ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ.

 

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

2 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

3 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

3 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

4 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

4 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

4 hours ago