Mysore
27
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಮೈ.ವಿವಿ ನೂತನ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ರಚನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್  ಅವರ ಅಧಿಕಾರದ ಅವಧಿಯು ಇದೇ ತಿಂಗಳ ದಿನಾಂಕ 15 ರಂದು ಮುಕ್ತಾಯವಾಗುತ್ತಿರುವ ಹಿನ್ನಲೆ ನೂತನ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚಿಸಲಾಗಿದೆ.

ಶೋಧನಾ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ ? 
ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್
ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪತಿ
ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ
ಸೆಂಟ್ರಲ್ ಡ್ರಗ್ ರೀಸರ್ಚ್ ಇನ್‌ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ

ಈ ಸಮಿತಿಯು ಕುಲಪತಿಗೆ ಅರ್ಹತೆ ಹೊಂದಿರುವ ಮೂವರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ನಂತರ, ರಾಜ್ಯಪಾಲರು ಒಬ್ಬರ ಹೆಸರನ್ನು ಆಯ್ಕೆ ಮಾಡಿ ನೂತನ ಕುಲಪತಿಯನ್ನಾಗಿ ನೇಮಕ ಮಾಡಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!