ಪ್ರೊ.ಎಂ.ಎಸ್.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ಚ್ ಕಮಿಟಿ ಸಭೆ, ಶರತ್ ಅನಂತಮೂರ್ತಿ ಸೇರಿ ಮೂವರ ಹೆಸರು ಅಂತಿಮ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಸ್ಥಾನಕ್ಕೆ ಮೂವರ ಹೆಸರನ್ನು ಶೋಧನಾ ಸಮಿತಿ ಶಿಫಾರಸು ಮಾಡಿದೆ.
ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಯು. ಆರ್. ಅನಂತಮೂರ್ತಿ ಅವರ ಪುತ್ರ ಡಾ.ಶರತ್ ಅನಂತಮೂರ್ತಿ ಅವರ ಹೆಸರು ಸತತ ಎರಡನೇ ಬಾರಿಗೆ ಕುಲಪತಿ ಸ್ಥಾನಕ್ಕೆ ಕೇಳಿ ಬಂದಿದೆ.
ಮೈಸೂರು ವಿವಿಯ ಕುಲಪತಿಯಾಗಿದ್ದ ಪ್ರೊ.ಜಿ.ಹೇಮಂತ ಕುಮಾರ್ ಅವರ ಅವಧಿಯು ನ.೧೪ಕ್ಕೆ ಮುಕ್ತಾಯವಾಗಿದ್ದರಿಂದ ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಮೈಸೂರಿನ ಎನ್ಐಇ ಸಂಸ್ಥೆ ಸಿಒಇ ಆಗಿದ್ದ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರ್ತ್ಯೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪಾಠಿ, ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ, ಸೆಂಟ್ರಲ್ ಡ್ರಗ್ ರಿಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ ನೇತೃತ್ವದ ಶೋಧನಾ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.
ನಂತರ, ಮೈಸೂರು ವಿವಿಗೆ ಹಂಗಾಮಿ ಕುಲಪತಿಯಾಗಿ ಪ್ರೊ.ಎಚ್.ರಾಜಶೇಖರ್ ಅವರನ್ನು ನಿಯೋಜಿಸಿದ್ದಲ್ಲದೆ, ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಅದರಂತೆ ಮೈಸೂರು ವಿವಿಯ ಪ್ರೊ.ಎಚ್.ರಾಜಶೇಖರ್, ಪ್ರೊ.ಜಿ.ವೆಂಕಟೇಶ್ ಕುಮಾರ್, ಡಿ.ಎಸ್.ಗುರು, ಪ್ರೊ.ಶರತ್ ಅನಂತಮೂರ್ತಿ, ಎಚ್.ಟಿ.ಬಸವರಾಜಪ್ಪ, ಎಚ್.ಎಸ್.ಬೋಜ್ಯ ನಾಯ್ಕ,ಎಂ.ಚಂದ್ರಶೇಖರ್, ಕೆ.ಚನ್ನಕೇಶವಲು,ಎಂ.ಧನಂಜಯ ಸೇರಿದಂತೆ ೭೧ ಮಂದಿ ಅರ್ಜಿ ಸಲ್ಲಿಸಿದ್ದರು.
ಬಲ್ಲ ಮೂಲಗಳ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ಮೈಸೂರು ವಿವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವರನ್ನೇ ಕುಲಪತಿ ಸ್ಥಾನಕ್ಕೆ ನೇಮಿಸಿಕೊಂಡು ಬರಲಾಗುತ್ತಿದ್ದು, ಪ್ರೊ.ಜಿ.ವೆಂಕಟೇಶ್ ಕುಮಾರ್ ಅಥವಾ ಡಿ.ಎಸ್.ಗುರು ಅವರಲ್ಲಿ ಒಬ್ಬರಿಗೆ ಅವಕಾಶ ಒಲಿಯಬಹುದು. ಇಲ್ಲದಿದ್ದರೆ ಶರತ್ ಅನಂತಮೂರ್ತಿಗೆ ಅವಕಾಶ ಸಿಗಬಹುದೆಂದು ಹೇಳಲಾಗಿದೆ.
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…