ಜಿಲ್ಲೆಗಳು

ಡಿ.9ರಂದು ವಿಶ್ವ ವಿಶೇಷಚೇತನರ ದಿನ ಆಚರಣೆ

ಮೈಸೂರು: ಲಯನ್ಸ್ ಕ್ಲಬ್ ಆಫ್ ಮೈಸೂರು, ಗೋಲ್ಡನ್ ಸಿಟಿ ಮತ್ತು ಮೈಸೂರು ಸ್ತ್ರೀ ಶಕ್ತಿ ಮಹಿಳಾ ವೇದಿಕೆ ಇವುಗಳ ಸಹಯೋಗದಲ್ಲಿ ಡಿ.೯ರಂದು ವಿಶ್ವ ವಿಶೇಷಚೇತನರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ೧೦ ಮಂದಿ ವಿಕಲಾಂಗರಿಗೆ ಉಚಿತ ಕೃತಕ ಕಾಲು ಪರಿಕರವನ್ನು ವಿತರಿಸಲಾಗುವುದು ಎಂದು ಲಯನ್ಸ್ ಕ್ಲಬ್ ಆಫ್ ಮೈಸೂರು ಕಾರ್ಯದರ್ಶಿ ಪ್ರಮಿಳಾ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೧ ಗಂಟೆಗೆ ಹೊಸಮಠದ ನಟರಾಜ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಮಹಾಪೌರ ಶಿವಕುಮಾರ್, ಶಾಸಕ ಎಲ್.ನಾಗೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ನಗರಪಾಲಿಕೆ ಸದಸ್ಯರಾದ ಭಾಗ್ಯ ಮಾದೇಶ್, ಕಾಂಗ್ರೆಸ್ ಮುಖಂಡ ಹರೀಶ್‌ಗೌಡ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಈಗಾಗಲೇ ಗುರುತಿಸಲಾಗಿರುವ ೧೦ ಮಂದಿ ಬಡ ಕುಟುಂಬದ ವಿಕಲಾಂಗರಿಗೆ ಕೃತಕ ಕಾಲು ವಿತರಿಸಲಾಗುವುದು ಎಂದು ತಿಳಿಸಿದರು.

ಸುರೇಶ್, ಜಿ.ಸೋಮಚಂದ್ರ ಮೂರ್ತಿ, ಲಕ್ಷ್ಮೀಪತಿ, ಜಿ.ಎನ್.ಉಮಾಶಂಕರ್, ಆಶಾ ಜೆ.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago