ಮೈಸೂರು : ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ‍್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಆಶಿಸಿದರು.
ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದರು.
ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ಮಾರ್ಗದರ್ಶನ ನೀಡಲಾಗುವುದು.
ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…
ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…