ಮೈಸೂರು : ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ12 ಸಾವಿರ ಮಂದಿ ಕಣದಲ್ಲಿರುವ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ನೋಟಾ ವೋಟು ಚಲಾವಣೆ ಮಾಡಿದ್ದಾರೆ.
ನೋಟಾ ಯಾವುದೇ ಕ್ಷೇತ್ರಗಳ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರದೆ ಇದ್ದರೂ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಅಂತರವನ್ನು ಹೆಚ್ಚು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡಬೇಕು, ಮತ ಪ್ರಮಾಣ ಹೆಚ್ಚಿಸಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗ ಪರಿಚಯಿಸಿದ ನೋಟಾ ಇತ್ತೀಚಿನ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಸಾಕಷ್ಟು ಮತದಾರರು ಇದನ್ನು ಬಳಕೆ ಮಾಡಲು ಪ್ರಾರಂಭಿಸಿದ್ದಾರೆ. ಹಾಗೆ ನೋಡಿದರೆ 2018ರ ರಾಜ್ಯ ವಿಧಾನಸಭಾ ಚುನಾವನೆಯಲ್ಲಿ 16 ಸಾವಿರ ಮಂದಿ ನೋಟಾ ಪ್ರಯೋಗ ಮಾಡಿದ್ದರು. ಆದರೆ, ಈ ಬಾರಿ ಆ ಸಂಖ್ಯೆ ಕ್ಷೀಣಿಸಿದ್ದು, ಮೈಸೂರು ಜಿಲ್ಲೆಯಲ್ಲಿ 12,575 ಮಂದಿ ನೋಟಾ ಚಲಾವಣೆ ಮಾಡಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಹೆಚ್ಚು : ಜೆಡಿಎಸ್‌ನ ಜಿ.ಟಿ.ದೇವೇಗೌಡ, ಕಾಂಗ್ರೆಸ್‌ನ ಮಾವಿನಹಳ್ಳಿ ಸಿದ್ದೇಗೌಡ ಹಾಗೂ ಬಿಜೆಪಿಯ ಕವೀಶ್ ಗೌಡ ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚು 2,220 ಮಂದಿ ನೋಟಾಗೆ ಮತ ಚಲಾಯಿಸಿದ್ದಾರೆ. ಅದನ್ನು ಹೊರತುಪಡಿಸಿದರೆ ದರ್ಶನ್ ಧ್ರುವನಾರಾಯಣ ಹಾಗೂ ಹರ್ಷವರ್ಧನ್ ಸ್ಪರ್ಧಿಸಿದ್ದ ನಂಜನಗೂಡು ಮೀಸಲು ಕ್ಷೇತ್ರದಲ್ಲಿ1452 ಮತದಾರರು ನೋಟಾ ಆಯ್ಕೆ ಮಾಡಿದ್ದಾರೆ. ಇಲ್ಲಿ ಸ್ಪರ್ಧಿಸಿದ್ದ 10 ಸ್ಪರ್ಧಿಗಳ ವೋಟು ಸಾವಿರಕ್ಕಿಂತ ಕಡಿಮೆ ಇದೆ. ಅಂದರೆ ಅಭ್ಯರ್ಥಿಗಳಿಗಿಂತ ನೋಟಾ ವೋಟೆ ಹೆಚ್ಚಾಗಿದೆ.
ಉಳಿದಂತೆ ತಿ.ನರಸೀಪುರದಲ್ಲಿ 1,335, ಕೃಷ್ಣರಾಜದಲ್ಲಿ1,306, ನರಸಿಂಹರಾಜದಲ್ಲಿ1,209, ಎಚ್.ಡಿ.ಕೋಟೆಯಲ್ಲಿ 1,184, ಚಾಮರಾಜದಲ್ಲಿ1,181, ಹುಣಸೂರಿನಲ್ಲಿ894, ವರುಣ ಕ್ಷೇತ್ರದಲ್ಲಿ634, ಪಿರಿಯಾಪಟ್ಟಣದಲ್ಲಿ 621 ಹಾಗೂ ಕೆ.ಆರ್.ನಗರ ಕ್ಷೇತ್ರದಲ್ಲಿ 539 ಮತದಾರರು ಯಾವುದೇ ಅಭ್ಯರ್ಥಿಗಳಿಗೆ ಮಣೆ ಹಾಕದೆ ನೋಟಾ ಬಟನ್ ಒತ್ತುವ ಮೂಲಕ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…