ನಂಜನಗೂಡು: ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಎರಡನೇ ದಿನವಾದ ಇಂದು ಸುತ್ತೂರಿನಲ್ಲಿ 135 ಜೋಡಿಗಳು ನವಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಜಾತ್ರೆಯ ಪ್ರಯುಕ್ತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು 135 ಜೋಡಿಗಳು ಸತಿಗಳಾಗಿದ್ದಾರೆ.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಇನ್ನು ಜಾತ್ರೆಯ ಪ್ರಯುಕ್ತ ಬರುವ ಎಲ್ಲಾ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಜಾತ್ರೆ ಮುಗಿಯುವವರೆಗೂ ಪ್ರಸಾದ ವ್ಯವಸ್ಥೆ ನಿರಂತರವಾಗಿದೆ.





