ಮೈಸೂರು

ಸಿದ್ದರಾಮಯ್ಯ ಅವರನ್ನು 135 ಮಂದಿ ಶಾಸಕರು ಸೇರಿ ಸಿಎಂ ಮಾಡಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಎಲ್ಲಾ 135 ಮಂದಿ ಶಾಸಕರು ಸೇರಿ ಸಿಎಂ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಕೂಡಾ ಸಿದ್ದರಾಮಯ್ಯ ಅವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡದ ಅವರು, ಯಾವುದೇ ಕಾರಣ ಇಲ್ಲದೇ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲಾಗುವುದು ಎಂದು ಹೇಳುತ್ತಿದ್ದಾರೆ. ನಮ್ಮದು ಸ್ಥಿರ ಸರ್ಕಾರವಾಗಿದ್ದು, ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎಂಬ ಕಾರಣಕ್ಕೆ ಎಲ್ಲರೂ ಒಗ್ಗೂಡಿದ್ದರು. ನಿನ್ನೆ ನಡೆದ ಜನಾಂದೋಲನ ಸಮಾವೇಶದಲ್ಲಿ ಡಿಕೆ ಶಿವಕುಮಾರ್‌ ಸೇರಿದಂತೆ ಎಲ್ಲಾ ನಾಯಕರು ಸಿಎಂ ಗೆ ಬೆಂಬಲ ನೀಡಿದ್ದೆ ಸಾಕ್ಷಿ ಎಂದರು.

ಮುಡಾ ಪ್ರಕರಣದಿಂದ ನಮ್ಮ ಶಕ್ತಿ ಕುಗ್ಗಿಲ್ಲ. ಬಿಜೆಪಿ-ಜೆಡಿಎಸ್ ಪ್ರತ್ಯುತ್ತರ ಸಲುವಾಗಿ ಜನಾಂದೋಲನ ಮೂಲಕ ತಿರುಗೇಟು ನೀಡಿದ್ದೇವೆ ಎಂದು ಟಾಂಗ್‌ ಕೊಟ್ಟರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

2 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

2 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

3 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

3 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

3 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

4 hours ago