ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕಿ ಸುಶೀಲಾ ಸಾವು ವಿಚಾರ ಕೇಳಿ ಬೇಸರ ಆಗಿದ್ದು, ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲು ಸೂಚನೆ ನೀಡಿ, 4 ಸಾವಿರ ಮಾಸಾಶನ ಬರುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟು ಜಾರಿಗೊಳಿಸಲು ಪ್ರಯತ್ನ ಪಡುತ್ತೇನೆ ಎಂದರು.
ಜೂ.26ರ ರಾತ್ರಿ ತಮ್ಮ ಮನೆ ಬಳಿ ಚಿರತೆ ದಾಳಿಗೆ ಸಿಲುಕಿದ್ದ ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸುಶೀಲಾ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…