Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಮೈಸೂರು – ಮಳವಳ್ಳಿ ಮುಖ್ಯರಸ್ತೆಯನ್ನು ಎರಡು ವರ್ಷದ ಹೆಣ್ಣು ಚಿರತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.

ದ್ವಿಚಕ್ರವಾಹನದ ಸವಾರರಿಬ್ಬರಿಗೂ ತೀವ್ರ ಗಾಯಗಳಾಗಿದ್ದು ಬನ್ನೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಅರಣ್ಯ ಅಧಿಕಾರಿ ಮಂಜುನಾಥ್ ರವರು ಆಂದೋಲನೊಂದಿಗೆ ಮಾತನಾಡಿ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ, ಹೆಣ್ಣು ಚಿರತೆ ಸಾವದಪ್ಪಿದ್ದು, ತಮ್ಮ ವಶಕ್ಕೆ ಪಡೆಯಲಾಗಿದೆ, ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags: