ಮೈಸೂರು

ಕಾಡಿನಿಂದ ಹೊರಬಂದ 20 ಹುಲಿಗಳು ; ಕಾಡಂಚಿನ ಜನರಲ್ಲಿ ಹೆಚ್ಚಿದ ಆತಂಕ

ಮೈಸೂರು : ಹುಲಿ-ಮಾನವ ಸಂಘರ್ಷ ತಡೆಗೆ ಅರಣ್ಯ ಇಲಾಖೆ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವುದರ ನಡುವೆಯೂ ಕಾಡಿನಿಂದ ನಾಡಿಗೆ 20 ಗಳು ಬಂದಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.

ಜಿಲ್ಲೆಯಲ್ಲಿ ನಿರಂತರ ಹುಲಿ ದಾಳಿಯಿಂದ ಜನರು ಬೆಚ್ಚಿ ಬಿದ್ದಿರುವ ಸಂದರ್ಭದಲ್ಲಿ ಅಧಿಕಾರಿಗಳು ಈ ವಿಚಾರವನ್ನು ಹೊರ ಹಾಕಿರುವುದು ಕಾಡಂಚಿನ ಗ್ರಾಮಗಳ ಜನರಲ್ಲಿ ಮತ್ತಷ್ಟು ಆತಂಕವನ್ನುಂಟು ಮಾಡಿಸಿದೆ. ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯಪ್ರದೇಶದಲ್ಲಿ ಹುಲಿಗಳ ಸಂಖ್ಯೆಹೆಚ್ಚಾಗಿರುವುದೇ ಹುಲಿಗಳ ದಾಳಿ ಹೆಚ್ಚಲು ಕಾರಣವಾಗಿದೆ.

ಹುಲಿಗಳ ಸಂತತಿ ಹೆಚ್ಚಳವಾಗಿರುವ ಕಾರಣ ಸೂಕ್ತ ನೆಲೆಗಾಗಿ ಹುಡುಕಾಡುತ್ತಿವೆ. ನೆಲೆಯನ್ನು ಕಂಡುಕೊಳ್ಳಲು ಪರದಾಡುವಾಗ ಅರಣ್ಯದಂಚಿಗೆ ಬರಲು ಸಾಧ್ಯವಾಗುತ್ತಿದೆ. ಚಳಿಗಾಲ ಹುಲಿಗಳ ಮಿಲನದ ಸಮಯವೂ ಆಗಿರುವುದರಿಂದ ಸಂಗಾತಿಯನ್ನು ಹುಡುಕಿಕೊಂಡು ಜನವಸತಿ ಪ್ರದೇಶಗಳತ್ತ ಬರುತ್ತಿವೆ ಎಂದು ಅರಣ್ಯಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಇದನ್ನು ಓದಿ: ಹುಲಿ ದಾಳಿಯಿಂದ ತಪ್ಪಿಸಲು ಫೇಸ್‌ ಮಾಸ್ಕ್‌ ಮೊರೆ ಹೋದ ಅರಣ್ಯ ಇಲಾಖೆ 

ಕಾಡಿನಿಂದ ನಾಡಿನತ್ತ ಮುಖ ಮಾಡುವಾಗ ತನಗೆ ಎದುರಾಗುವ ಮನುಷ್ಯನಿಂದ ಅಪಾಯವಿದೆ ಎಂದು ಭಾವಿಸಿ ದಾಳಿಗೆ ಮುಂದಾಗುತ್ತಿರುವ ಹುಲಿಗಳನ್ನು ಸೆರೆ ಹಿಡಿಯಲು ನಿರಂತರ ಕಾರ್ಯಚರಣೆನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಸೆರೆ ಹಿಡಿದ ಹುಲಿಗಳು ಮೈಸೂರಿನ ಕೂರ್ಗಳ್ಳಿಯಲ್ಲಿರುವ ವನ್ಯ ಪ್ರಾಣಿಗಳ ಪುನರ್ವಸತಿ ಕೇಂದ್ರ ಹಾಗೂ ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನಕ್ಕೆ ರವಾನೆ ಮಾಡುತ್ತಿದ್ದಾರೆ.

ಒಂದು ಅಂದಾಜಿನ ಪ್ರಕಾರ ಸುವಾರು 20ಹುಲಿಗಳು ಕಾಡಿನಿಂದ ಹೊರಬಂದು ನಾಡಿನಲ್ಲಿ ಅಲೆದಾಡುತ್ತಿರುವ ಕುರಿತು ಮಾಹಿತಿ ದೊರೆತಿದ್ದು, ಎಚ್.ಡಿ. ಕೋಟೆ ಭಾಗದಲ್ಲಿ 8 ಮೈಸೂರಿನ ಆಸುಪಾಸಿನಲ್ಲಿ 5 ಹುಲಿಗಳು ಓಡಾಡುತ್ತಿವೆ. ಇದರ ಜೊತೆಗೆ ನಂಜನಗೂಡು, ಹುಣಸೂರು ಭಾಗವು ಸೇರಿದಂತೆ ಸುವಾರು 20ಹುಲಿಗಳು ಅಡ್ಡಾಡುತ್ತಿವೆ. ಜನವಸತಿ ಪ್ರದೇಶದ ಆಸುಪಾಸಿನಲ್ಲಿ ಅಲೆದಾಡುತ್ತಿರುವ ಹುಲಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಹೇಳಿದರು.

ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಹುಲಿಗಳನ್ನು ಸೆರೆ ಹಿಡಿುುಂವ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಡ್ರೋನ್ ಕ್ಯಾಮರಾ ಮೂಲಕ ಹುಲಿಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡುವುದಲ್ಲದೆ, ಜನರಿಗೆ ಜಾಗೃತಿ ಮೂಡಿಸುವ ಮೂಲಕವೂ ಮನವರಿಕೆ ಮಾಡಲಾಗುತ್ತಿದೆ. ಹಲವೆಡೆ ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆಯಸಂದೇಶ ರವಾನೆ. ಬೆಳೆ ಕಟಾವು ವಾಡುವ ರೈತರಿಗೆ ಸೂಕ್ತ ರಕ್ಷಣೆ ನೀಡುವುದರಲ್ಲೂ ನಿರತರಾಗಿದ್ದೇವೆ. ಭೀಮ, ಧನಂಜಯ ಸೇರಿದಂತೆ ನುರಿತ ಸಾಕಾನೆಗಳ ನೆರವಿನಿಂದಲೂ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

37 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

48 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago