ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಅಂಬಾರಿ ಸಾರಥಿ ಅಭಿಮನ್ಯುವಿಗೆ ಈ ಬಾರಿ ಕೊಕ್ ನೀಡಲಾಗಿದೆ. ಕ್ಯಾಪ್ಟನ್ ಅಭಿಮನ್ಯು 2026ರ ದಸರಾ ಗಜಪಡೆಯ ಪಟ್ಟಿಯಿಂದ ಹೊರಗುಳಿದಿದ್ದಾನೆ. ಅಭಿಮನ್ಯುವಿಗೆ 60 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದೀಗ ಈ ಬಾರಿ ಯಾರು ಅಂಬಾರಿ ಹೊರಲಿದ್ದಾರೆ ಎಂಬ ಕುತೂಹಲ ಮೈಸೂರು ಜನರಲ್ಲಿ ಮೂಡಿದೆ.
ಈ ಬಾರಿ ದಸರಾ ಗಜಪಡೆಯಲ್ಲಿ ಧನಂಜಯ, ಏಕಲವ್ಯ, ಮಹೇಂದ್ರ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ, ಕಾವೇರಿ, ರೂಪ, ಚೈತ್ರ ಹಾಗೂ ಶ್ರೀಕಂಠ ಸೇರಿದ್ದಾರೆ.
ಇನ್ನು ತುರ್ತು ಸಂದರ್ಭಕ್ಕಾಗಿ ಭೀಮ ಹಾಗೂ ಹರ್ಷನನ್ನು ಮೀಸಲು ಪಡೆಯಾಗಿ ಇರಿಸಲಾಗಿದೆ.
ಅಭಿಮನ್ಯು ಹೊರಗುಳಿದಿರುವ ಹಿನ್ನೆಲೆಯಲ್ಲಿ ಈ ಬಾರಿ ಅಂಬಾರಿ ಹೊರುವ ಜವಾಬ್ದಾರಿ ಯಾರ ಹೆಗಲಿಗೆ ಬೀಳಲಿದೆ ಎಂಬುದೇ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…