ಮೈಸೂರು

ಈಜಲು ಹೋದ ಯುವಕ ಸುಳಿಗೆ ಸಿಲುಕಿ ಸಾವು

ನಂಜನಗೂಡು: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್‌ ಕಟ್ಟೆಯಲ್ಲಿ ಜರುಗಿದೆ.

ಮೃತ ಯುವಕ ಅಭಿಷೇಕ್(23) ನಂಜನಗೂಡಿನ ರಾಮಸ್ವಾಮಿ ಲೇಔಟ್‌ನ ನಿವಾಸಿಯಾಗಿದ್ದಾನೆ. ಪಟ್ಟಣದಿಂದ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದ ವೇಳೆ ಅಭಿಷೇಕ್‌ ಸುಳಿಗೆ ಸಿಲುಕಿ ಸಾವನಪ್ಪಿದ್ದಾನೆ. ಇನ್ನುಳಿದ ಮೂವರು ಬದುಕುಳಿದಿದ್ದಾರೆ. ಘಟನೆ ಸ್ಥಳದಲ್ಲಿ ಈ ಹಿಂದೆಯೂ ಮೈಸೂರಿನ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದ.

ಕಬಿನಿ ಜಲಾಶಯದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹ ಸಾವು ನೋವುಗಳು ಸಂಭವಿಸುತ್ತಿದೆ. ಯಾವುದೇ ನಾಮಫಲಕಗಳನ್ನು ಹಾಕದೆ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದಾರೆ. ಇಂತಹ ಸೂಕ್ಷ್ಮ ಪ್ರದೇಶದಲ್ಲಿ ನಾಮ ಫಲಕ ಹಾಕಿ ಸಾರ್ವಜನಿಕರು ಬಾರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಘಟನೆ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರ ದಾಖಲಾಗಿದೆ.

andolana

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

2 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

2 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

2 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

2 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

3 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

3 hours ago