ಮೈಸೂರು : ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ ಆರೋಪ ಕೇಳಿ ಬಂದಿದ್ದು, ಹಣವೂ ಇಲ್ಲದೇ, ನಾಳಿನ ಪರೀಕ್ಷೆಗೆ ಪ್ರವೇಶ ಪತ್ರವು ಸಿಗದೆ ವಿದ್ಯಾರ್ಥಿಗಳು ಅತಂತ್ರರಾಗಿರುವಂತಹ ಘಟನೆ ನಗರದ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಉಪನ್ಯಾಸಕಿ ಹರ್ಷಿತಾ ವಿರುದ್ಧ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಜು. 6ರಂದೇ ಉಪನ್ಯಾಸಕಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 468, 470, 420ರ ಅಡಿ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಗೂಗಲ್ಪೇ ಹಾಗೂ ಫೋನ್ಪೇ ಮೂಲಕ 200 ವಿದ್ಯಾರ್ಥಿಗಳಿಂದ 25 ಲಕ್ಷ ರೂ. ಶುಲ್ಕ ಪಡೆದಿದ್ದು, ವಿದ್ಯಾರ್ಥಿಗಳ ಹಣ ದುರುಪಯೋಗ ಪಡಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ.
ಫೀಸ್ ಸಂದಾಯವಾಗದ ಹಿನ್ನೆಲೆ ಕಾಲೇಜಿನಲ್ಲಿ ಪ್ರವೇಶಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಸದ್ಯ ನಾಪತ್ತೆಯಾಗಿರುವ ಉಪನ್ಯಾಸಕಿ ಹರ್ಷಿತಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…