ಮೈಸೂರು

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು. ಶೇ.40ಕ್ಕಿಂತ ಕಡಿಮೆ ಬರುವ ಕಾಲೇಜುಗಳ ಪ್ರಾಂಶುಪಾಲರ ಮೇಲೆ ಕ್ರಮಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್‌ಕುಮಾರ್ ತಾಕೀತು ಮಾಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮೈಸೂರು ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಜಿಲ್ಲೆಯು 14ನೇ ಸ್ಥಾನವನ್ನು ಪಡೆದಿತ್ತು. ಈ ಬಾರಿ ಅದಕ್ಕಿಂತ ಕಡಿಮೆ ಫಲಿತಾಂಶ ಬರದಂತೆ ನೋಡಿಕೊಂಡು 10ರೊಳಗೆ ಸ್ಥಾನ ಪಡೆಯಬೇಕು. ಈ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.

ಪರೀಕ್ಷೆಯು ಹತ್ತಿರದಲ್ಲಿ ಇರುವ ಕಾರಣ ಮೊದಲ ಐದರೊಳಗೆ ಬರಲು ಶ್ರಮಿಸಿದರೂ ಹತ್ತನೇ ಸ್ಥಾನಕ್ಕೆ ತಲುಪಬಹುದು. ಸರ್ಕಾರಿ ಕಾಲೇಜುಗಳಲ್ಲಿ ಶೇ.40ಕ್ಕಿಂತ ಕಡಿಮೆ ಫಲಿತಾಂಶ ಬಂದರೆ ನಾನು ಸುಮ್ಮನಿರುವುದಿಲ್ಲ. ಅಂತಹ ಕಾಲೇಜುಗಳ ಪ್ರಾಂಶುಪಾಲರ ಕಾರ್ಯವೈಖರಿ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಂಜನಗೂಡು ತಾಲ್ಲೂಕಿನ ಕಾರ್ಯ, ದಾಸನೂರು, ಕೆ.ಆರ್.ನಗರ ತಾಲ್ಲೂಕಿನ ಗಂಧನಹಳ್ಳಿ ಕಾಲೇಜುಗಳಲ್ಲಿ ಪೂರ್ವ ಪರೀಕ್ಷೆಯಲ್ಲಿ ಇಂಗ್ಲಿಷ್, ಅರ್ಥಶಾಸ, ರಾಜ್ಯಶಾಸ ವಿಷಯಗಳಲ್ಲಿ ಕಡಿಮೆ ಅಂಕ ಪಡೆದಿರುವ ವಿದ್ಯಾರ್ಥಿಗಳ ಅಂಕಿ ಅಂಶಗಳನ್ನು ಪರಿಶೀಲಿಸಿದ ಸಿಇಒ, ಒಂದೊಂದು ಕಾಲೇಜುಗಳ ಪ್ರಾಂಶುಪಾಲರಿಂದ ವಿವರಣೆ ಪಡೆದು ಚಾಟಿ ಬೀಸಿದರು.

ದೇವನೂರು ಸರ್ಕಾರಿ ಕಾಲೇಜಿನಲ್ಲಿ 30 ವಿದ್ಯಾರ್ಥಿಗಳಿದ್ದು, ಫಲಿತಾಂಶ ಸುಧಾರಿಸಲಾಗಿದೆ. ಅದೇ ರೀತಿ ಬೇರೆ ಕಾಲೇಜುಗಳಲ್ಲಿ ಸುಧಾರಿಸಲು ಯಾಕೆ ಹಿಂದೇಟು ಹಾಕಲಾಗುತ್ತಿದೆ? ನೀವು ವಿಶೇಷ ತರಗತಿಗಳನ್ನು ಮಾಡುವ ಜತೆಗೆ, ಮೊದಲ ಎರಡು ತರಗತಿ ಬಿಟ್ಟು ಬರುವ ವಿದ್ಯಾರ್ಥಿಗಳನ್ನು ಗಮನಿಸಬೇಕು. ಅಂತಹವರ ಪೋಷಕರನ್ನು ಕರೆಸಿ ಎಚ್ಚರಿಕೆ ಕೊಡಿಸಬೇಕು ಎಂದು ಸೂಚಿಸಿದರು.

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಫಲಿತಾಂಶ ತೃಪ್ತಿಕರವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಸ್.ಯುಕೇಶ್‌ಕುಮಾರ್ ಅವರು, ಶೇ.100ರಷ್ಟು ಗುರಿ ಇಟ್ಟುಕೊಂಡರೆ ಕನಿಷ್ಠ 80ರಷ್ಟು ಫಲಿತಾಂಶ ಬರಲಿದೆ. ಮಕ್ಕಳಿಗೆ ಸುಮ್ಮನೇ ಪಾಠ ಮಾಡಿ ಹೋದರೆ ಪ್ರಯೋಜನವಾಗದು. ನಮ್ಮ ಗುರಿ ಫಲಿತಾಂಶ ಹೆಚ್ಚು ಮಾಡುವ ಕಡೆಗೆ ಇರಬೇಕು ಎಂದು ತಿಳಿಸಿದರು.

ಪಿಯು ಡಿಡಿ ನಾಗಮ್ಮ ಮಾತನಾಡಿ, ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶ ಸುಧಾರಿಸಲು ಅಗತ್ಯ ಕ್ರಮಕೈಗೊಂಡು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಾಂಶುಪಾಲರು, ಉಪನ್ಯಾಸಕರು ಪೂರ್ವ ಪರೀಕ್ಷೆಯಲ್ಲಿ 20 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಕರೆದು ಮಾತುಕತೆ ನಡೆಸಿ ಹೆಚ್ಚಿನ ಪಾಠ ಮಾಡಲಾಗುತ್ತಿದೆ. ಕೆಲವು ಉಪನ್ಯಾಸಕರು ಇಂತಿಷ್ಟು ಮಕ್ಕಳು ಎನ್ನುವಂತೆ ದತ್ತು ಪಡೆದು ಕೊಂಡು ಫಲಿತಾಂಶ ಹೆಚ್ಚು ತರಲು ಒಪ್ಪಿಕೊಂಡಿದ್ದಾರೆ. ಕೆಲವು ಉಪನ್ಯಾಸಕರು ವಿದ್ಯಾರ್ಥಿನಿಲಯಗಳಿಗೆ ತೆರಳಿ ವಿಶೇಷ ತರಗತಿ ನಡೆಸುತ್ತಿದ್ದಾರೆ ಎಂದು ವಿವರಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

10 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

10 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

10 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

11 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

11 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

11 hours ago