ಮೈಸೂರು

3ನೇ ಆಷಾಢ ಶುಕ್ರವಾರ : ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸಿದ ಬೆಟ್ಟದ ತಾಯಿ

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ.

ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಗೆ ನೀಡುತ್ತಿದ್ದಾರೆ.

ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಸಿಂಹವಾಹಿನಿ ಅಲಂಕಾರದಿಂದ ಕಂಗೊಳಿಸುವಂತೆ ಮಾಡಿದ್ದು, ಬಗೆಬಗೆಯ ಹೂವು, ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಳಗ್ಗಿನ ಜಾವ 5:30ರಿಂದಲೇ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ರುದ್ರಾಭಿಷೇಕ, ಪಂಚಾಮೃತ, ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೇರವೇರುತ್ತಲೇ ಇವೆ.

ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್ :3ನೇ ಶುಕ್ರವಾರವೂ ಸಹ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ನಿಗದಿಪಡಿಸಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ನೇರ ಸಂದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 11 ಗಂಟೆವರೆಗೆ ಭಕ್ತರ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

lokesh

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

6 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

7 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

7 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

7 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

7 hours ago