ಮೈಸೂರು

ಮೈಸೂರು| ಲಾಂಗ್‌, ಮಚ್ಚಿನಿಂದ ಹಲ್ಲೆ ಪ್ರಕರಣ: ಆಸ್ಪತ್ರೆ ಸೇರಿದ್ದ ನಾಲ್ವರು ನಾಪತ್ತೆ

ಮೈಸೂರು: ಇಲ್ಲಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಕೆ.ಆರ್‌.ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ದಿಢೀರ್‌ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಎಂಬುವವರ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿದ್ದರು.

ಹಲ್ಲೆಗೊಳಗಾದವರು ಕೆ.ಆರ್.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ನಾಲ್ವರು ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಹಲ್ಲೆಗೊಳಗಾದವರು ವೈದ್ಯರ ಅನುಮತಿಯನ್ನೂ ಪಡೆಯದೇ ಏಕಾಏಕಿ ಆಸ್ಪತ್ರೆಯಿಂದ ತೆರಳಿದ್ದಾರೆ ಎನ್ನಲಾಗಿದೆ. ನಾಲ್ವರ ನಾಪತ್ತೆಯಿಂದ ಹಲವು ಅನುಮಾನ ಹುಟ್ಟಿಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

2 mins ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

7 mins ago

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

9 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

10 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

10 hours ago