ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ರಿಂದ 28ವರ್ಷ ವಯೋ ಮಿತಿಯ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಜೂನ್ 23ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಯನ್ನು ಒಳಗೊಂಡಿದೆ.
ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅಗತ್ಯ ಪ್ರಮಾಣಪತ್ರಗಳು, ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಬಳಿಕ ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಯನ್ನು ಆನ್‌ಲೈನ್‌ನಲ್ಲಿ ಅಪ್ ಲೋಡ್ ಮಾಡಿ, ನಿಮ್ಮ ಮೀಸಲು ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ, ಸ್ವೀಕೃತಿ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ. ಹೆಚ್ಚಿನ ಮಾಹಿತಿಗಳನ್ನು central bankodindia.co.in ವೆಬ್‌ಸೈಟ್‌ನಲ್ಲಿ ಪಡೆಯಬಹುದು.





