ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಐದು ಗ್ಯಾರಂಟಿಗಳು ದೇಶಾದ್ಯಂತ 5ಜಿ ಪ್ರೋಗ್ರಾಂ ಎಂದೇ ಖ್ಯಾತಿಯಾಗಿವೆ. ಗ್ಯಾರಂಟಿ ಬಗ್ಗೆ ಊಹಾಪೋಹ ಬೇಡ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಮಾತೇ ಇಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಪ್ಪ ಅಮರನಾಥ್ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಪಾಲರೇ ತನ್ನ ಭಾಷಣದಲ್ಲಿ ಗ್ಯಾರಂಟಿ ಯೋಜನೆಯಿಂದ 4.6ಕೋಟಿ ಜನರೊಗೆ ಅನುಕೂಲವಾಗಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಗ್ಯಾರಂಟಿ ಯೋಜನೆಗಳ ಪಧಾದಿಕಾರಿಗಳ ನೇತೃತ್ವದಲ್ಲಿ ಜನರಿಗೆ ಯೋಜನೆಗಳು ತಲುಪಿದೆಯಾ ಎಂಬ ಬಗ್ಗೆ ಸಮಿತಿ ಮಾಡಿ ಪರಿಶೀಲನೆ ಮಾಡುವ ಚಿಂತನೆ ಇದೆ ಎಂದರು.
ಇನ್ನು ಗ್ಯಾರಂಟಿ ಯೋಜನೆಗಳನ್ನು ಯಾರಾದರೂ ದುರುಪಯೋಗ ಪಡಿಸಿಕೊಳ್ಳುವುದು ಕಂಡು ಬಂದರೆ ಟೋಲ್ ಫ್ರೀ ನಂಬರ್ 8277000555 ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ತಿಳಿಸಿದರು.
ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಎಲ್ಲಾ ಯೋಜನೆಗಳನ್ನು ಜಾರಿಗೊಳಿಸಿ ಬಡಜನರಿಗೆ ನೆರವಾಗುತ್ತಿದೆ. ಗೃಹಲಕ್ಷ್ಮಿಗೆ ಕೆಲ ತಾಂತ್ರಿಕ ಸಮಸ್ಯೆಯಿಂದ ದೋಷ ಉಂಟಾಗಿತ್ತು. ಇದೀಗ ಅದು ಕೂಡ ಸರಿಯಾಗಿದ್ದು, ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಹೋಗ್ತಾ ಇದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕ ಮಾರುತಿ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.
ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…
ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…
ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…