ಮೈಸೂರು

ಪಶುಪಾಲನೆಯಿಂದ ಶೇ5 ರಷ್ಟು ಜಿಡಿಪಿ ವೃದ್ಧಿ: ಸಚಿವ ಮಹದೇವಪ್ಪ

ದೇಶದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡಲಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸದುಕೊಂಡಿದೆ. ರಾಷ್ಟ್ರದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮತ್ತು ಕರ್ನಾಟಕ ಪಶುವೈದ್ಯಕೀಯ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ “ಪಶುವೈದ್ಯರ ರಾಜ್ಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮ” ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶುಪಾಲನೆಯಿಂದ ಶೇ5 ರಷ್ಟು ಜಿಡಿಪಿ ವೃದ್ಧಿಯಾಗುತ್ತಿರುವುದು ಪ್ರಶಂಸೆಯ ವಿಚಾರ. ಹೆಣ್ಣು ಕರುಗಳೇ ಜನಿಸುವಂತೆ ಗರ್ಭ ಧರಿಸುವಷ್ಟು ತಂತ್ರಜ್ಞಾನ ಮುಂದುವರೆದಿದೆ. ಸಂತಾನಾಭಿವೃದ್ಧಿಯ ಜೊತೆಗೆ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಬೇಕು ಎಂದು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಪಶುಗಳಿಗಿಂತ ಯಂತ್ರದ ಬಳಕೆ ಹೆಚ್ಚಾಗಿದೆ. ಪ್ರಾಣಿಗಳ ಗೊಬ್ಬರವನ್ನು ಹೆಚ್ಚು ಬಳಸದೆ, ರಾಸಾಯನಿಕದ ಮೊರೆ ಹೋಗಲಾಗುತ್ತದೆ. ಇದು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಆದಷ್ಟು ಈ ಕ್ರಮವನ್ನು ತಡೆಗಟ್ಟುವಂತೆ ಜಾಗೃತಿ ಮೂಡಿಸಬೇಕು ಎಂದರು.

ಟಿಪ್ಪು ಸುಲ್ತಾನ್ ಕೂಡ ಹಳ್ಳಕಾರ್ ತಳಿಗಳ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ನಮ್ಮ ದೊಡ್ಡಪ್ಪ ಏನೂ ಓದಿರಲಿಲ್ಲ. ಅವರು ಕೂಡ ಊರಿನಲ್ಲಿ ಅನಾರೋಗ್ಯಕ್ಕೆ ತುತ್ತಾದ ಪಶುಗಳಿಗೆ ಔಷಧಿ ನೀಡುತ್ತಿದ್ದರು. ಆದರೆ ಇಂದು ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಬೆಳೆದಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

30 mins ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

33 mins ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

36 mins ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

38 mins ago

‘ಮೋದಿ ವಿದೇಶ ನೀತಿ ದೇಶದ ಹಿತಕ್ಕೆ ಮಾರಕ’

‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ  ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…

47 mins ago

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

4 hours ago