ಮೈಸೂರು

5 ಹುಲಿ ಸಾವು ಪ್ರಕರಣ : ನಿ.ಡಿಸಿಎಫ್‌ ಪೂವಯ್ಯ ಹೇಳಿದಿಷ್ಟು?

ಮೈಸೂರು: ಹನೂರಿನ ಸಮೀಪದ ಅರಣ್ಯದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಶಾನದ ಶಂಕೆ ದೃಢವಾಗಿದೆ. ಹೀಗಾಗಿ, ತಪ್ಪಿತಸ್ತರಿಗೆ ಸುಮಾರು 7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದ ಹಿರಿಯ ಅರಣ್ಯಧಿಕಾರಿ ಹಾಗೂ ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ ಹಾಕಿರಬಹುದು ಎಂಬ ಶಂಕೆ ದೃಢವಾಗಿದೆ. ಫಾರೆನ್ಸಿಕ್ ಲ್ಯಾಬ್ ನಿಂದ ವರದಿ ಬರಲು ಒಂದುವಾರ ಆಗಲಿದೆ. ಬಳಿಕ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಹೇಳಿದರು.

ಹುಲಿಗಳು ಒಂದು ಪ್ರಾಣಿಯನ್ನು ಕೊಂದ ಬಳಿಕ ಅದು ಸಂಪೂರ್ಣ ಮುಗಿಯುವವರೆಗೂ ಬೇರೆ ಪ್ರಾಣಿಯನ್ನು ಕೊಲ್ಲುವುದಿಲ್ಲ. ಹಾಗೆಯೇ ಇತ್ತೀಚಿಗೆ ಈ ಭಾಗದಲ್ಲಿ ಒಂದು ಹಸು ಬಲಿ ಪಡೆದಿದೆ ಎನ್ನುವ ಮಾಹಿತಿ ಇದೆ. ವಾಚರ್‌ಗಳಿಗೆ ಸಂಬಳ ನೀಡದಿರುವುದೇ ಇದಕ್ಕೆಲ್ಲ ಕಾರಣ ಎಂದು ಹೇಳಲು ಸಾಧ್ಯವಿಲ್ಲ ಎಂದರು.

5 ಹುಲಿ ಸಾವು ದೊಡ್ಡ ನಷ್ಟ: ನನ್ನ ಅವಧಿಯಲ್ಲೂ ಈ ಹಿಂದೆ ಚಿರತೆಗೆ ವಿಷ ಹಾಕಿದ್ದ ಪ್ರಕರಣ ಗುಂಡ್ಲುಪೇಟೆಯಲ್ಲಿ ಜರುಗಿತ್ತು. ಆ ವೇಳೆ ಕಾನೂನು ಶಿಕ್ಷೆಯಾಗಿತ್ತು. ಈ ಪ್ರಕಾರಣದಲ್ಲೂ ಅದೇ ಮಾದರಿ ಶಿಕ್ಷೆ ಆಗಲಿದೆ. 5 ಹುಲಿ ಸಾವು ದೊಡ್ಡ ನಷ್ಟ. ಇದರಲ್ಲಿ ಅಧಿಕಾರಿಗಳ ಪಾತ್ರವೇನಿಲ್ಲ. ಸಾವಿಗೆ ವಿಷ ಹಾಕಿದವರೇ ನೇರ ಹೊಣೆಯಾಗುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago