ಮೈಸೂರು: ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಸ್ಥಳೀಯ ಠಾಣಾ ವ್ಯಾಪ್ತಿಯ 23 ಸ್ಥಳಗಳಲ್ಲಿ 50 ಕೃತಕ ಬುದ್ದಿಮತ್ತೆ (ಎಐ) ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಈ ಎಐ ಕ್ಯಾಮರಾಗಳು ಇದೇ ಜುಲೈ. 7ರಿಂದ ತನ್ನ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದೆ.
ಇನ್ಮುಂದೆ ಟ್ರಾಫಿಕ್ ಉಲ್ಲಂಘನೆ ಮಾಡುವವರು ಅಧಿಕೃತ ವೆಬ್‌ಸೈಟ್ ಮೂಲಕ ದಂಡದ ಮೊತ್ತವನ್ನು ಸ್ಥಳೀಯ ಠಾಣೆಯಲ್ಲಿ ಪಾವತಿಸಬೇಕು ಎಂದು ಇಲಾಖೆ ತಿಳಿಸಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಒಂದೆರೆಡು ರಸ್ತೆ ಅಪಘಾತಗಳಿಂದ ಸಾವು ನೋವುಗಳಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನಿಯಮ ಉಲ್ಲಂಘಿಸಿ ಚಾಲನೆ ಮಾಡುವವರನ್ನು ಕ್ಯಾಮರಾ ಮೂಲಕ ಸೆರೆಹಿಡಿದು ದಂಡ ವಿಧಿಸಲಾಗುವುದು. ಅಥವಾ http://payfine.mchallan.com:7271 ವೆಬ್‌ಸೈಟ್ ಮೂಲಕ ಅಥವಾ ಸ್ಥಳೀಯ ಠಾಣೆಗಳಿಗೆ ತೆರಳಿ ದಂಡ ಪಾವತಿಸಬಹುದು ಎಂದು ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.