ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಜಲಾಶಯವು ಪ್ರಸ್ತುತ ಬರ್ತಿಯಾಗುವ ಹಂತದಲ್ಲಿದೆ.
ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 18000 ಹೆಚ್ಚು ಇದ್ದು, ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಪ್ರಯುಕ್ತ ಕಬಿನಿ ಜಲಾಶಯದಿಂದ 5000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿದ್ದು ಯಾವುದೇ ಕ್ಷಣದಲ್ಲಾದರೂ ಇನ್ನು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇರುತ್ತದೆ.
ಆದ್ದರಿಂದ ಸಾರ್ವಜನಿಕರು ಕಬಿನಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…