ಮೈಸೂರು

ಕಬಿನಿಯಿಂದ ನದಿಗೆ 5ಸಾವಿರ ಕ್ಯುಸೆಕ್‌ ನೀರು ; ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಜಲಾಶಯವು ಪ್ರಸ್ತುತ ಬರ್ತಿಯಾಗುವ ಹಂತದಲ್ಲಿದೆ.

ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 18000 ಹೆಚ್ಚು ಇದ್ದು, ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಪ್ರಯುಕ್ತ ಕಬಿನಿ ಜಲಾಶಯದಿಂದ 5000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿದ್ದು ಯಾವುದೇ ಕ್ಷಣದಲ್ಲಾದರೂ ಇನ್ನು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇರುತ್ತದೆ.

ಆದ್ದರಿಂದ ಸಾರ್ವಜನಿಕರು ಕಬಿನಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago