ಮೈಸೂರು

ಮೈಸೂರು ಜಿಲ್ಲೆಯಲ್ಲಿ 57 ಸಾವಿರ ಫಸ್ಟ್‌ ಟೈಂ ವೋಟರ್ಸ್

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು ಮಾಡಲು ಸ್ವೀಪ್‌ ಸಮಿತಿ ಜಿಲ್ಲಾದ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.

ಜಿಲ್ಲೆಯಲ್ಲಿ 26,38,487 ಮತದಾರರಿದ್ದು, ಇದರಲ್ಲಿ 18ರಿಂದ 19 ವರ್ಷದೊಳಗಿನ 57,048 ಯುವ ಮತದಾರರು ಮೊದಲ ಬಾರಿಗೆ ಮತದಾನ ಮಾಡುವ ಉತ್ಸಾಹದಲ್ಲಿದ್ದಾರೆ. ಯುವ ಮತದಾನವನ್ನು ಉತ್ತೇಜಿಸುವ ಸಲುವಾಗಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ತಲಾ ಒಂದೊಂದು ಯುವಮತಗಟ್ಟೆ ಸ್ಥಾಪನೆ ಮಾಡಲಾಗುತ್ತಿದೆ. ಯುವ ಅಧಿಕಾರಿಗಳನ್ನೇ ಇಲ್ಲಿಗೆ ನಿಯೋಜನೆ ಮಾಡಿರುವುದು ವಿಶೇಷ.

ದೇಶಕ್ಕೆ ಯುವಜನರೆ ಆಸ್ತಿ. ಯುವಶಕ್ತಿ ದೇಶದ ಸಂಪತ್ತು ಕೂಡ. ಮತದಾನ ಪ್ರಕ್ರಿಯೆಯಲ್ಲಿ ಯುವಜನತೆ ಹೆಚ್ಚು ಭಾಗವಹಿಸಬೇಕು ಎಂಬ ಕಾರಣಕ್ಕೆ ಈ ಬಾರಿ ಕಾಲೇಜು ಸೇರಿದಂತೆ ಹಲವೆಡೆ ಮತಜಾಗೃತಿ ಮಾಡಲಾಗಿದೆ. 57 ಸಾವಿರ ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ಖುಷಿ ತಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಯುವ ಮತದಾರರು : ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಅತಿಹೆಚ್ಚು ಸಂಖ್ಯೆ ಯುವ ಮತದಾರರಿದ್ದಾರೆ. 7,644 ಮಂದಿ ಮೊದಲ ಬಾರಿಗೆ ಮತಚಲಾಯಿಸಲು ಸಿದ್ಧರಾಗಿದ್ದಾರೆ. ಅಂತೆಯೇ ಹುಣಸೂರು ಕ್ಷೇತ್ರದಲ್ಲಿ 6,473,ಕೆ.ಆರ್‌.ನಗರ ಕ್ಷೇತ್ರದಲ್ಲಿ 6043, ಪಿರಿಯಾಪಟ್ಟಣ ಕ್ಷೇತ್ರದಲ್ಲಿ 5,243, ಎನ್‌.ಆರ್‌.ಕ್ಷೇತ್ರದಲ್ಲಿ 5,919, ವರುಣ ಕ್ಷೇತ್ರದಲ್ಲಿ 5,022, ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ4,925, ತಿ.ನರಸೀಪುರ ಕ್ಷೇತ್ರದಲ್ಲಿ 4,118, ನಂಜನಗೂಡು ಕ್ಷೇತ್ರದಲ್ಲಿ 4,027, ಕೆ.ಆರ್‌.ಕ್ಷೇತ್ರದಲ್ಲಿ 3,704, ಚಾಮರಾಜ ಕ್ಷೇತ್ರದಲ್ಲಿ 3,860 ಯುವ ಮತದಾರರಿದ್ದಾರೆ.

lokesh

Recent Posts

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

43 mins ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

2 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

3 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

4 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

4 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

4 hours ago