Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಜನ್‌ ಜಾತೀಯ ಉನ್ನತ್‌ ಯೋಜನೆಗೆ ಮೈಸೂರಿನ 62 ಗ್ರಾಮಗಳು ಆಯ್ಕೆ

ಮೈಸೂರು: ಮೂಲ ಸೌಕರ್ಯ ಎದುರಿಸುತ್ತಿರುವ ಬುಡಕಟ್ಟು ಸಮುದಾಯಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ.

ಪ್ರಧಾನ ಮಂತ್ರಿ ಜನ್‌ ಜಾತೀಯ ಉನ್ನತ್‌ ಗ್ರಾಮ ಯೋಜನೆಯಡಿ ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆಯಾಗಿರುವುದು ವಿಶೇಷ.

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ಹುಣಸೂರು, ಮೈಸೂರು, ಪಿರಿಯಾಪಟ್ಟಣ, ನಂಜನಗೂಡು, ಟಿ.ನರಸೀಪುರ ತಾಲ್ಲೂಕಿನಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಗೆ ಮೊದಲ ಹಂತದಲ್ಲಿ 62 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.

ಇಲ್ಲಿ ಬುಡಕಟ್ಟು ಜನರ ಸಮಗ್ರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಈ ಯೋಜನೆ ತಯಾರಿಸಲಾಗಿದೆ. ಬುಡಕಟ್ಟು ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪಣ ತೊಟ್ಟಿದ್ದು, ಈ ಮೂಲಕ ಹಳ್ಳಿಗಳ ಸಮಗ್ರ ಅಭಿವೃದ್ಧಿಗೂ ಶ್ರಮ ವಹಿಸುತ್ತಿದೆ.

Tags: