ಮೈಸೂರು

ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ : ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮೈಸೂರು : ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಯನ್ನು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು.

ಪೆರೇಡ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೆರೇಡ್ ನಲ್ಲಿ ಪೊಲೀಸ್ ಇಲಾಖೆಯ ಪುರುಷ ಹಾಗೂ ಮಹಿಳಾ ತಂಡಗಳು, ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ, ಅಬಕಾರಿ ದಳ, ಎನ್ ಎಸ್ ಎಸ್, ಎನ್ ಸಿ ಸಿ ತಂಡಗಳು, ವಿಶೇಷ ಚೇತನ ಮಕ್ಕಳ ತಂಡ ಹಾಗೂ ಶಾಲಾ ಕಾಲೇಜು ತಂಡಗಳು ಭಾಗವಹಿಸಿದ್ದವು. ಈ ವೇಳೆ ಉಸ್ತವಾರಿ ಸಚಿವರು 78 ಸ್ವಾತಂತ್ರೋತ್ಸವ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಗುಡ್ ಶಫರ್ಡ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ವಿವಿಧತೆಯಲ್ಲಿ ಏಕತೆ ದೇಶಭಕ್ತಿ ಗೀತೆ, ನಿರ್ಮಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ದೇಶ ಭಕ್ತಿ ಗೀತೆಗೆ ಸಮೂಹ ನೃತ್ಯ ಹಾಗೂ ಸಂತ ಫಿಲೋಮಿನಾ ಪ್ರೌಢ ಶಾಲಾ ಮಕ್ಕಳಿಂದ ದೇಶ ಪ್ರೇಮಿ ಭಗತ್ ಸಿಂಗ್ ಅವರ ಮರಣ ದಂಡನೆಯ ನೃತ್ಯ ರೂಪಕವನ್ನು ಪ್ರದರ್ಶನವನ್ನು ಪ್ರಸ್ತುತಪಡಿಸಿದರು.

ಸಮಾರಂಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಮೂಡಾ ಅಧ್ಯಕ್ಷರಾದ ಕೆ ಮರಿಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯ ಐ ಜಿ ಪಿ ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತ ರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

3 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

3 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

3 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

3 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago