ಮೈಸೂರು

ರೈತರ ಸೋಲಾರ್‌ ನೀರಾವರಿ ಪಂಪ್‌ಸೆಟ್‌ಗೆ ಶೇ.80 ಸಬ್ಸಿಡಿ

– ಕುಸುಮ್‌-ಬಿ ಯೋಜನೆ ಲಾಭ ಪಡೆಯಲು ಸೆಸ್ಕ್‌ ಮನವಿ
– ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯಕ್ಕೆ ಅನುಕೂಲ

ಮೈಸೂರು: ಹಗಲು ವೇಳೆಯಲ್ಲಿ ನೀರಾವರಿಗೆ ವಿದ್ಯುತ್‌ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌-ಸೆಟ್‌ ಪಡೆದುಕೊಳ್ಳಲು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೌರಶಕ್ತಿ ಬಳಕೆ ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರವು ರೈತರು ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಲು ‘ಕುಸುಮ್ ಬಿ’ ಯೋಜನೆ ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ರೈತರು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿಕೊಳ್ಳಬಹುದು. ಇದರಿಂದಾಗಿ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ.

ಕುಸುಮ್-ಬಿ ಯೋಜನೆ ಅಡಿಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ರೂಪಿಸಲಾಗಿದೆ. ಆ ಮೂಲಕ ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ *ಶೇ.80ರಷ್ಟು ಸಹಾಯಧನ* ನೀಡಲಾಗುತ್ತಿದೆ. ಕುಸುಮ್-ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್ ಅಳವಡಿಸಲು ಒತ್ತು ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ *ರಾಜ್ಯ ಸರ್ಕಾರ ಶೇ.50, ಕೇಂದ್ರ ಸರ್ಕಾರ ಶೇ.30* ಮತ್ತು ಫಲಾನುಭವಿಗಳು ಶೇ.20 ಮೊತ್ತವನ್ನು ಪಾವತಿಸಬೇಕಿದೆ.

ಇದನ್ನು ಓದಿ: ಬಹಳ ವರ್ಷಗಳ ಕನಸು ಈಡೇರಿಸಿದ ಸರ್ಕಾರ : ಶಾಸಕ ಜಿಟಿಡಿ

* ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರೆದ ಬಾವಿಗಳಿಗೆ ಸೋಲಾರ್‌ ಪಂಪ್‌-ಸೆಟ್‌ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್‌ಲೈನ್‌ ಮೂಲಕವಾಗಿ www.souramitra.com ವೆಬ್‌ಸೈಟ್‌ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

* ಸದರಿ ಪೋರ್ಟಲ್‌ ಮೂಲಕ ಸೋಲಾರ್‌ ಪಂಪ್‌-ಸೆಟ್‌ಗಳ ಅಳವಡಿಕೆಗಾಗಿ ರೈತರು www.souramitra.com ಪೋರ್ಟಲ್‌ನಲ್ಲಿ ಅರ್ಜಿ ನೋಂದಾಯಿಸಿ, ವೆಂಡರ್‌/ಏಜೆನ್ಸಿಯನ್ನು ಆಯ್ಕೆ ಮಾಡಿಕೊಂಡು, ಶೇ.20 ಹಣವನ್ನು ಪಾವತಿಸಬೇಕಿದೆ.

* ರೈತರಿಗೆ ತಿಳಿಸುವುದೇನೆಂದರೆ, ಪಿಎಂ ಕುಸುಮ್‌-ಬಿ ಯೋಜನೆಗೆ ಸಂಬಂಧಿಸಿದಂತೆ, www.kreld.karnataka.gov.in ವೆಬ್‌ಸೈಟ್‌ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್‌ ಸೆಟ್‌ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDLನ ಸಹಾಯವಾಣಿ 080-22202100/8095132100 ಮುಖಾಂತರ ಅಥವಾ ಹತ್ತಿರದ ಚಾವಿಸನಿನಿ ಕಚೇರಿ/ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ OTPಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ದೂರವಾಣಿ ಸಂಖ್ಯೆ *9449598669* ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

32 mins ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

50 mins ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

1 hour ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

1 hour ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

2 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

2 hours ago