ಮೈಸೂರು

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಜಿ.ಟಿ.ದೇವೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ನಗರದ ವಿವಿಧ ಬಡಾವಣೆಗಳಲ್ಲಿ ಮಳೆನೀರು ಚರಂಡಿ ನಿರ್ಮಾಣ ಮಾಡಲಾಗಿದೆ. ಆದರೆ, ಕೆಲವು ಕಡೆ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೊಳ್ಳಲು 27 ಕೋಟಿ ವಿಶೇಷ ಅನುದಾನಕ್ಕಾಗಿ ಮೈಸೂರು ಮಹಾನಗರ ಪಾಲಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಆರ್ಥಿಕ ಇಲಾಖೆ ಈ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು ಎಂದು ವಿವರಣೆ ನೀಡಿದರು.

ಇತ್ತೀಚೆಗೆ ಮಂಡಿಸಲಾದ ಬಜೆಟ್ ನಲ್ಲಿ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ 1500 ಕೋಟಿ ರೂಪಾಯಿಗಳನ್ನು ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದನ್ನು ಪುರಸ್ಕರಿಸಿರುವ ಮುಖ್ಯಮಂತ್ರಿಗಳು ಸುಮಾರು 750 ರಿಂದ 800 ಕೋಟಿ ರೂಪಾಯಿಗಳನ್ನು ಈ ಉದ್ದೇಶಕ್ಕಾಗಿ ಮೀಸಲಿಡಲಾಗುತ್ತಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

ಎಂಡಿಎದಿಂದ 300 ಕೋಟಿ
ಮೈಸೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ. ಇದಕ್ಕೆ 200 ಕೋಟಿ ರೂಪಾಯಿಗಳನ್ನೂ ನೀಡಲಾಗಿದೆ. ಇದೇ ವೇಳೆ, ನಗರದ ರಸ್ತೆಗಳಿಗೆ ವೈಟ್ ಟಾಪಿಂಗ್ ಯೋಜನೆಗಳಿಗಾಗಿ 300 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಸಿಎ ನಿವೇಶನಗಳ ಮಾರಾಟ
ವಿವಿಧ ಬಡಾವಣೆಗಳಲ್ಲಿ ಇರುವ ಸಿಎ ನಿವೇಶನಗಳನ್ನು ಮಾರಾಟ ಮಾಡುವಂತೆ ಜಿ.ಟಿ.ದೇವೇಗೌಡ ಅವರು ನೀಡಿದ ಸಲಹೆಗೆ ಸ್ಪಂದಿಸಿದ ಸಚಿವ ಬೈರತಿ ಸುರೇಶ್ ಅವರು, ಸಿಎ ನಿವೇಶನಗಳನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರಿಂದ ಸುಮಾರು 4 ರಿಂದ 5 ಸಾವಿರ ಕೋಟಿ ರೂಪಾಯಿ ಆದಾಯವನ್ನು ನಿರೀಕ್ಷಿಸಲಾಗಿದೆ. ಈ ಹಣವನ್ನು ಮೈಸೂರು ಮತ್ತು ಹೊಸ ಬಡಾವಣೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲು ರೂಪುರೇಶೆ ರೂಪಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

19 mins ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

37 mins ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

58 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

3 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

4 hours ago